alex Certify
ಕನ್ನಡ ದುನಿಯಾ       Mobile App
       

Kannada Duniya

ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿನ ‘ಸಾಲ ಮನ್ನಾ’ ಕುರಿತು ಸಿಎಂ ಹೇಳಿದ್ದೇನು?

ಮುಖ್ಯಮಂತ್ರಿ ಕುಮಾರಸ್ವಾಮಿಯವರು ತಮ್ಮ ಬಜೆಟ್ ನಲ್ಲಿ ರೈತರ ಸಾಲಮನ್ನಾ ಯೋಜನೆ ಘೋಷಿಸಿದ್ದರು ಅದಿನ್ನೂ ಕಾರ್ಯರೂಪಕ್ಕೆ ಬಂದಿಲ್ಲ. ‘ಸಾಲ ಮನ್ನಾ’ಗಾಗಿ ರೈತ ಸಮುದಾಯ ಜಾತಕ ಪಕ್ಷಿಯಂತೆ ಕಾಯುತ್ತಿದ್ದು, ದಿನಾಂಕಗಳು ಮಾತ್ರ ಮುಂದೂಡಿಕೆಯಾಗುತ್ತಲೇ ಇವೆ.

ಇದರ ಮಧ್ಯೆ ಗುರುವಾರದಂದು ವಿಧಾನಸೌಧದಲ್ಲಿ ವಿವಿಧ ರೈತ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ ಮುಖ್ಯಮಂತ್ರಿ ಕುಮಾರಸ್ವಾಮಿಯವರು, ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ರೈತರು ಪಡೆದಿರುವ ಸಾಲದ ಕುರಿತು ಮಹತ್ವದ ಹೇಳಿಕೆ ನೀಡಿದ್ದಾರೆ.

ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ರೈತರು ಪಡೆದಿರುವ ಬೆಳೆ ಸಾಲದ ಪೈಕಿ ಮೊದಲ ಕಂತಿನಲ್ಲಿ ಐವತ್ತು ಸಾವಿರ ರೂಪಾಯಿ ಪಾವತಿಸುವುದಾಗಿ ತಿಳಿಸಿರುವ ಕುಮಾರಸ್ವಾಮಿಯವರು, ಇದಕ್ಕಾಗಿ ಪ್ರಸಕ್ತ ವರ್ಷ 6,500 ಕೋಟಿ ರೂಪಾಯಿಗಳನ್ನು ಮೀಸಲಿಡಲಾಗಿದೆ ಎಂದು ತಿಳಿಸಿದ್ದಾರೆ.

ಸರ್ಕಾರ, ಬಜೆಟ್ ನಲ್ಲಿ ಘೋಷಿಸಿದಂತೆ ರೈತರ ಸಾಲ ಮನ್ನಾ ಮಾಡಲು ಬದ್ಧವಾಗಿದ್ದು, ಇದಕ್ಕೆ ಯಾವುದೇ ಆರ್ಥಿಕ ಅಡಚಣೆ ಇಲ್ಲ. ಜೊತೆಗೆ ಸರ್ಕಾರಿ ಆಸ್ತಿಯನ್ನು ಮಾರಾಟ ಮಾಡುವ ಅಗತ್ಯವೂ ಇಲ್ಲ ಎಂದು ತಿಳಿಸಿರುವ ಮುಖ್ಯಮಂತ್ರಿಗಳು, ಒಂದಷ್ಟು ಕಾಲಾವಕಾಶ ನೀಡುವಂತೆ ಸಭೆಯಲ್ಲಿ ಪಾಲ್ಗೊಂಡಿದ್ದ ರೈತ ಮುಖಂಡರಿಗೆ ಮನವಿ ಮಾಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...