alex Certify
ಕನ್ನಡ ದುನಿಯಾ       Mobile App
       

Kannada Duniya

ಸಂಪುಟ ಸಭೆಯಲ್ಲಿ ರಾಷ್ಟ್ರೀಕೃತ ಬ್ಯಾಂಕ್ ಗಳ ಸಾಲಮನ್ನಾಗೆ ಸಿಗುತ್ತಾ ಸಮ್ಮತಿ…?

ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ರೈತರಿಗೆ ವರಮಹಾಲಕ್ಷಿ ಹಬ್ಬದ ಕೊಡುಗೆಯಾಗಿ ರಾಷ್ಟ್ರೀಕೃತ ಬ್ಯಾಂಕ್ ಗಳ ಸಾಲಮನ್ನಾಗೆ ಸಮ್ಮತಿ ಸಿಗಲಿದೆಯೇ…? ಇಂತದೊಂದು ನಿರೀಕ್ಷೆ ಇಂದಿನ ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟ ಸಭೆಯ ಮೇಲಿದೆ.

ಸಂಜೆ ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆ ಮೇಲೆ ಹಲವಾರು ನಿರೀಕ್ಷೆಗಳಿದ್ದು, ಮಳೆಯಿಂದ ಸಂಕಷ್ಟಕ್ಕೊಳಗಾಗಿರುವ ಮಲೆನಾಡು, ಕೊಡಗು ಭಾಗದ ಸಂತ್ರಸ್ತರಿಗೆ ಪರಿಹಾರ ಹಾಗು ಪುನರ್ವಸತಿ ಕಲ್ಪಿಸುವುದು, ರಾಜ್ಯದಲ್ಲಿನ ಪ್ರವಾಹ, ಬರ ಪರಿಸ್ಥಿತಿ ಕುರಿತು ಸುದೀರ್ಘ ಚರ್ಚೆ ಜತೆಗೆ 5 ಸಾವಿರ ಕೋಟಿ ವಿಶೇಷ ಪ್ಯಾಕೇಜ್‌ಗಾಗಿ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸುವ ಬಗ್ಗೆ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.

ಸಹಕಾರ ಬ್ಯಾಂಕ್‍ ಗಳಲ್ಲಿನ ರೈತರ ಸಾಲಮನ್ನಾ ಮಾಡಿರುವ ರಾಜ್ಯ ಸರ್ಕಾರ, ರಾಷ್ಟ್ರೀಕೃತ ಬ್ಯಾಂಕ್‍ ಗಳಲ್ಲಿನ ಸಾಲವನ್ನೂ ಮನ್ನಾ ಮಾಡುವುದಾಗಿ ಘೋಷಣೆ ಮಾಡಿದ ಹಿನ್ನಲೆಯಲ್ಲಿ ಇಂದಿನ ಸಂಪುಟ ಸಭೆಯಲ್ಲಿ ಈ ಕುರಿತು ಅಧಿಕೃತ ನಿರ್ಧಾರ ಹೊರ ಬೀಳಲಿದೆ ಎಂಬ ನಿರೀಕ್ಷೆಯಿದೆ.

ಆದರೆ ಮೂಲಗಳ ಪ್ರಕಾರ ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿನ ರೈತರ ಸಾಲ ಮನ್ನಾ ಮಾಡುವ ಬಗ್ಗೆ ಇಂದಿನ ಸಂಪುಟ ಸಭೆಯಲ್ಲಿ ನಿರ್ಧಾರ ಪ್ರಕಟಿಸುವುದು ಅನುಮಾನವಾಗಿದೆ ಎನ್ನಲಾಗುತ್ತಿದೆ. ಹಾಗಾಗಿ ರೈತರಿಗೆ ವರಮಹಾಲಕ್ಷಿ ಹಬ್ಬದ ಬಂಪರ್ ಕೊಡುಗೆ ಸಿಗಲಿದೆಯೇ….ಎಂಬುದನ್ನು ಕಾದು ನೋಡಬೇಕಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...