alex Certify
ಕನ್ನಡ ದುನಿಯಾ       Mobile App
       

Kannada Duniya

ಸಾಲ ಪಡೆದ ರೈತರಿಗೆ ನೆಮ್ಮದಿಯ ಸುದ್ದಿ ನೀಡಿದ ಸಿಎಂ

ಸಾಲ ಮನ್ನಾ ವಿಚಾರಕ್ಕೆ ಸಂಬಂಧಿಸಿದಂತೆ ಇನ್ನೂ ಸರ್ಕಾರದ ಆದೇಶ ಲಭ್ಯವಾಗದ ಹಿನ್ನೆಲೆಯಲ್ಲಿ ಇದನ್ನೇ ನೆಪವಾಗಿಟ್ಟುಕೊಂಡು ರೈತರಿಗೆ ನೋಟಿಸ್ ನೀಡುವ ಮೂಲಕ ಕಿರುಕುಳ ನೀಡುತ್ತಿರುವ ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿಗಳಿಗೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಖಡಕ್ ಸೂಚನೆ ನೀಡಿದ್ದಾರೆ.

ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ಇನ್ನೆರಡು ದಿನಗಳೊಳಗಾಗಿ ಸಾಲ ಮನ್ನಾ ಅರ್ಜಿ ರೈತರಿಗೆ ಲಭ್ಯವಾಗಲಿದೆ. ಇದುವರೆಗೂ ಸಾಲ ವಸೂಲಿಗೆ ಕ್ರಮ ಕೈಗೊಳ್ಳದ ಅಧಿಕಾರಿಗಳು, ರಾಜ್ಯ ಸರ್ಕಾರ ಸಾಲಮನ್ನಾ ಆದೇಶ ಹೊರಡಿಸಿದ ಬಳಿಕ ಅನವಶ್ಯಕವಾಗಿ ರೈತರಿಗೆ ಕಿರುಕುಳ ನೀಡುತ್ತಿದ್ದಾರೆಂದು ಹೇಳಿದರು.

ಹೀಗಾಗಿ ಇನ್ನು ಮುಂದೆ ಬ್ಯಾಂಕ್ ಅಧಿಕಾರಿಗಳು ರೈತರಿಗೆ ನೋಟಿಸ್ ನೀಡಿದರೆ ಅಂಥವರ ವಿರುದ್ಧ ರೈತರ ಮೂಲಕ ದೂರು ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಈ ಮೂಲಕ ಸಾಲ ಮನ್ನಾ ಕುರಿತು ಆತಂಕದಲ್ಲಿರುವ ರೈತ ಸಮುದಾಯಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಭರವಸೆ ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...