alex Certify
ಕನ್ನಡ ದುನಿಯಾ       Mobile App
       

Kannada Duniya

ಬೆಂಗಳೂರಿನಲ್ಲಿದ್ದರೂ ಸಭೆಗೆ ಬಾರದ ಯಡಿಯೂರಪ್ಪ

ರೈತರ ಸಾಲ ಮನ್ನಾ ಕುರಿತಂತೆ ಚರ್ಚಿಸಲು ಮುಖ್ಯಮಂತ್ರಿ ಕುಮಾರಸ್ವಾಮಿಯವರು ಇಂದು ಬೆಳಗ್ಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ರೈತರು ಹಾಗೂ ರಾಜಕೀಯ ನಾಯಕರ ಸಭೆ ನಡೆಸಿದ್ದರು.

ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ಅವರು ಸಭೆಯಲ್ಲಿ ಉಪಸ್ಥಿತರಿದ್ದು, ರಾಜ್ಯದ ವಿವಿಧ ಜಿಲ್ಲೆಗಳ ರೈತ ಮುಖಂಡರು ಈ ಸಭೆಗೆ ಆಗಮಿಸಿ ತಮ್ಮ ಅಭಿಪ್ರಾಯಗಳನ್ನು ಮಂಡಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರಿಗೂ ಈ ಸಭೆಗೆ ಆಹ್ವಾನಿಸಲಾಗಿದ್ದು, ಆದರೆ ಅವರು ತಾವು ಪ್ರವಾಹಕ್ಕೆ ತುತ್ತಾಗಿರುವ ಮಂಗಳೂರಿಗೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಸಭೆಗೆ ಬರಲಾಗುವುದಿಲ್ಲವೆಂದು ಹೇಳಿದ್ದರೆನ್ನಲಾಗಿದೆ. ತಮ್ಮ ಪರವಾಗಿ ಗೋವಿಂದ ಕಾರಜೋಳರನ್ನು ಸಭೆಗೆ ಕಳುಹಿಸಿಕೊಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಆದರೆ ಯಡಿಯೂರಪ್ಪನವರು ಮಂಗಳೂರಿಗೆ ತೆರಳದೆ ಬೆಂಗಳೂರಿನಲ್ಲಿಯೇ ಇದ್ದರೆಂದು ತಿಳಿದು ಬಂದಿದ್ದು, ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರೈತರ ಸಾಲ ಮನ್ನಾ ಮಾಡುವ ಭರವಸೆ ನೀಡಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿ ಈಗ ಇಲ್ಲದ ಸಬೂಬು ಹೇಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...