alex Certify
ಕನ್ನಡ ದುನಿಯಾ       Mobile App
       

Kannada Duniya

ಬ್ಯಾಂಕ್ ನಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆತ್ನಿಸಿದ ರೈತ

ತಮ್ಮ ಹೊಲಕ್ಕೆ ನೀರಾವರಿ ಸೌಲಭ್ಯ ಕಲ್ಪಿಸುವುದಕ್ಕಾಗಿ ಪೈಪ್ ಲೈನ್ ಅಳವಡಿಸಲು ಬ್ಯಾಂಕ್ ನಿಂದ ಸಾಲ ಪಡೆದಿದ್ದ ರೈತರೊಬ್ಬರು, ಹೆಚ್ಚುವರಿ ಹಣದ ಅವಶ್ಯಕತೆ ಬಿದ್ದ ವೇಳೆ ಮಂಜೂರು ಮಾಡಲು ಮನವಿ ಮಾಡಿದ್ದು, ಇದಕ್ಕೆ ಅಧಿಕಾರಿಗಳು ಸ್ಪಂದಿಸದಿದ್ದಾಗ ಬ್ಯಾಂಕ್ ನಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಕೊಮ್ಮನಾಳಿನ ಶ್ರೀನಿವಾಸ್ ವಿಷ ಸೇವಿಸಿದ ರೈತರಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಶ್ರೀನಿವಾಸ್, ಶಿವಮೊಗ್ಗದ ಬಿ.ಹೆಚ್. ರಸ್ತೆಯ ಕಾರ್ಪೋರೇಷನ್ ಬ್ಯಾಂಕ್ ನಲ್ಲಿ ಒಂದು ಲಕ್ಷ ರೂ. ಸಾಲ ಪಡೆದುಕೊಂಡಿದ್ದರೆನ್ನಲಾಗಿದೆ.

ಆದರೆ ಪೈಪ್ ಲೈನ್ ಅಳವಡಿಕೆಗೆ ಹಣ ಕಡಿಮೆಯಾಗಿದ್ದು, ಹೆಚ್ಚುವರಿ ಸಾಲ ಮಂಜೂರು ಮಾಡುವಂತೆ ಬ್ಯಾಂಕ್ ಗೆ ಮನವಿ ಮಾಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದ ಅಧಿಕಾರಿಗಳು ಹೆಚ್ಚುವರಿ ಸಾಲ ಮಂಜೂರು ಮಾಡಲು ಮೀನಾಮೇಷ ಎಣಿಸಿದ್ದಾರೆ. ಬ್ಯಾಂಕ್ ಅಧಿಕಾರಿಗಳ ವರ್ತನೆಗೆ ರೋಸತ್ತ ಶ್ರೀನಿವಾಸ್ ಸೋಮವಾರದಂದು ವಿಷದ ಬಾಟಲಿಯೊಂದಿಗೆ ಬ್ಯಾಂಕ್ ಗೆ ಆಗಮಿಸಿ ವಿಷ ಸೇವಿಸಿದ್ದಾರೆ. ಇದರಿಂದ ಗಾಬರಿಗೊಂಡ ಬ್ಯಾಂಕ್ ಅಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದು, ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು ಶ್ರೀನಿವಾಸ್ ರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...