alex Certify
ಕನ್ನಡ ದುನಿಯಾ       Mobile App
       

Kannada Duniya

ನೆಲಮಂಗಲದಲ್ಲೊಂದು ಮನಕಲಕುವ ಘಟನೆ

nelamangal-df

ಬೆಂಗಳೂರು: ರಾಜ್ಯದಲ್ಲಿ ಸಾಲದ ಶೂಲದಿಂದ ಹಲವಾರು ರೈತರು ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಅನ್ನದಾತರ ಆತ್ಮಹತ್ಯೆ ಇನ್ನೂ ನಿಂತಿಲ್ಲ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲ್ಲೂಕಿನ ರೈತರೊಬ್ಬರು 30,000 ರೂ ಸಾಲ ತೀರಿಸಲಾಗದೇ ವಿಷ ಸೇವಿಸಿದ್ದು, ವಿಷಯ ತಿಳಿದ ಅವರ ಪತ್ನಿ ಆಘಾತದಿಂದ ಸಾವನ್ನಪ್ಪಿದ್ದಾರೆ.

ಅರಳೀದಿಬ್ಬದ ರೈತ ಹನುಮಯ್ಯನವರು ಟಿ. ಬೇಗೂರು ಗ್ರಾಮದ ಸಹಕಾರ ಸಂಘದಲ್ಲಿ 5 ವರ್ಷಗಳಿಂದ ಬೆಳೆ ಸಾಲ ಪಡೆದು ಪ್ರತಿವರ್ಷ ರಿನೀವಲ್ ಮಾಡುತ್ತಿದ್ದರು. ಆದರೆ, ಈ ಬಾರಿ ಬೆಳೆ ಬಾರದೇ ಸಾಲ ತೀರಿಸಲು ಸಾಧ್ಯವಾಗಿರಲಿಲ್ಲ.

ಇದರಿಂದ ಬೇಸತ್ತು ಕೀಟನಾಶಕ ಸೇವಿಸಿದ್ದಾರೆ. ಅಸ್ವಸ್ಥರಾಗಿದ್ದ ಹನುಮಯ್ಯ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ.

ಪತಿ ವಿಷ ಸೇವಿಸಿದ ಸುದ್ದಿ ತಿಳಿದ ಅವರ ಪತ್ನಿ ಆಘಾತದಿಂದ ಸಾವನ್ನಪ್ಪಿದ್ದಾರೆ. ಇದರಿಂದಾಗಿ ಕುಟುಂಬದವರು ಕಂಗಾಲಾಗಿದ್ದಾರೆ.

ಸುದ್ದಿ ತಿಳಿದ ಜಿಲ್ಲಾಡಳಿತ ಮತ್ತು ತಾಲ್ಲೂಕು ಆಡಳಿತದ ಅಧಿಕಾರಿಗಳು, ಆಸ್ಪತ್ರೆಗೆ ತೆರಳಿ ಹನುಮಯ್ಯರ ಆರೋಗ್ಯ ವಿಚಾರಿಸಿದ್ದಾರೆ.

ಮನೆಗೆ ತೆರಳಿ ಕುಟುಂಬದವರಿಗೆ ಸಾಂತ್ವನ ಹೇಳಿದ್ದು, ಅಂತ್ಯ ಸಂಸ್ಕಾರಕ್ಕೆ ಧನ ಸಹಾಯ ಮಾಡಿದ್ದಾರೆ. ಅಲ್ಲದೇ ಸರ್ಕಾರದಿಂದ ನೆರವು ನೀಡುವ ಭರವಸೆ ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...