alex Certify
ಕನ್ನಡ ದುನಿಯಾ       Mobile App
       

Kannada Duniya

ನೀರು ಕೇಳಿದ ರೈತರಿಗೆ ಲಾಠಿ ಏಟು

farmer

ಬೆಂಗಳೂರು: ಬಯಲು ಸೀಮೆಯ ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಯ ರೈತರು ಶಾಶ್ವತ ನೀರಾವರಿಗೆ ಒತ್ತಾಯಿಸಿ ನಡೆಸುತ್ತಿದ್ದ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಹೋರಾಟ ನಿರತ ರೈತರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ.

ಬೆಂಗಳೂರಿಗೆ ಆಗಮಿಸಿದ್ದ ಸಾವಿರಾರು ರೈತರು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಹಾಗೂ ಫ್ರೀಡಂ ಪಾರ್ಕ್ ಕಡೆ ತೆರಳಲು ಟ್ರ್ಯಾಕ್ಟರ್ ನಲ್ಲಿ ಹೊರಟಿದ್ದರು. ಸಾವಿರಾರು ಸಂಖ್ಯೆಯಲ್ಲಿ ರೈತರು ನುಗ್ಗಿದ್ದರಿಂದ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಬೆಂಗಳೂರು ಮೇಖ್ರಿ ಸರ್ಕಲ್, ವಿಂಡ್ಸರ್ ಮ್ಯಾನರ್ ಸರ್ಕಲ್ ಬಳಿ ರೈತರು ಬ್ಯಾರಿಕೇಡ್ ಗಳನ್ನು ತೆಗೆದು ಏಕಾಏಕಿ ನುಗ್ಗಿದ್ದು ಈ ಸಂದರ್ಭದಲ್ಲಿ ಪೊಲೀಸರು ಲಾಠಿ ಪ್ರಹಾರ ನಡೆಸಿದರು. ರೈತರು ಪೊಲೀಸರಿಂದ ತಪ್ಪಿಸಿಕೊಳ್ಳಲು ಅಲ್ಲಿಂದ ಓಡಿದರು.

ಅನ್ನದಾತರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದರಿಂದ ರೈತರೊಬ್ಬರ ಕೈ ಬೆರಳು ಮುರಿದಿದೆ. ಮತ್ತೊಬ್ಬ ರೈತರು ಅಸ್ವಸ್ಥಗೊಂಡಿದ್ದಾರೆ. ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಲಾಠಿ ಪ್ರಹಾರ ನಡೆಸಿರುವುದನ್ನು ಸದನದಲ್ಲಿ ಪ್ರಸ್ತಾಪಿಸಿ ಬಿಜೆಪಿ ಸದಸ್ಯರು ಪ್ರತಿಭಟನೆ ನಡೆಸಿದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...