alex Certify
ಕನ್ನಡ ದುನಿಯಾ       Mobile App
       

Kannada Duniya

ಟಿ.ಜೆ. ಅಬ್ರಹಾಂಗೆ 25 ಲಕ್ಷ ರೂ. ದಂಡ

supreme-court_7ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದ ಸಾಮಾಜಿಕ ಹೋರಾಟಗಾರ ಟಿ.ಜೆ. ಅಬ್ರಹಾಂ ಅವರ ಅರ್ಜಿಯನ್ನು ವಜಾಗೊಳಿಸಿರುವ ಸುಪ್ರೀಂ ಕೋರ್ಟ್ ಎರಡು ವಾರದೊಳಗೆ 25 ಲಕ್ಷ ರೂ. ದಂಡ ಪಾವತಿಸುವಂತೆ ಆದೇಶಿಸಿದೆ.

ಕಲಬುರಗಿ ಜಿಲ್ಲೆ ಅಳಂದದಲ್ಲಿ ನಿರ್ಮಿಸಲಾಗುತ್ತಿರುವ ಮಿನಿ ವಿಧಾನಸೌಧ ಕಾಮಗಾರಿಯನ್ನು ಬೇರೆ ಸರ್ವೇ ನಂಬರ್ ನಲ್ಲಿ ಮಾಡಲಾಗುತ್ತಿದೆ. ಇದಕ್ಕೆ ಶಾಸಕರ ಒತ್ತಡ ಕಾರಣವೆಂದು ಆರೋಪಿಸಿದ್ದ ಅಬ್ರಹಾಂ ಕಾಮಗಾರಿಯನ್ನು ಪ್ರಶ್ನಿಸಿ ಪಿಐಎಲ್ ಸಲ್ಲಿಸಿದ್ದರು.

ಇದರ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಜಾಗೊಳಿಸಿತ್ತಲ್ಲದೇ ಟಿ.ಜೆ. ಅಬ್ರಹಾಂ ಅವರಿಗೆ25 ಲಕ್ಷ ರೂ. ದಂಡ ವಿಧಿಸಿ ಎರಡು ವಾರಗಳೊಳಗಾಗಿ ಪಾವತಿಸಲು ಸೂಚಿಸಿದೆ. ಸರ್ಕಾರದ ಪರವಾಗಿ ಮಧುಸೂದನ್ ನಾಯಕ್ ವಾದಿಸಿದ್ದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...