alex Certify
ಕನ್ನಡ ದುನಿಯಾ       Mobile App
       

Kannada Duniya

4 ದಿನಗಳಿಂದ ನಿಯಂತ್ರಣಕ್ಕೆ ಬರ್ತಿಲ್ಲ ಕಾಡಿನ ಬೆಂಕಿ

ಕೊಡಗು: ಕೊಡಗು ಜಿಲ್ಲೆ ಸೋಮವಾರ ಪೇಟೆ ತಾಲ್ಲೂಕಿನ ದುಬಾರೆ ಸಮೀಪದ ಆನೆಕಾಡು ಪ್ರದೇಶದಲ್ಲಿ ಕಳೆದ 4 ದಿನಗಳಿಂದ ಬೆಂಕಿ ನಿಯಂತ್ರಣಕ್ಕೆ ಬಾರದಂತೆ ವ್ಯಾಪಿಸಿದೆ.

ಬಿಸಿಲು, ಗಾಳಿಯಿಂದಾಗಿ ಬೆಂಕಿಯನ್ನು ನಂದಿಸಲು ಕಷ್ಟಸಾಧ್ಯವಾಗಿದ್ದು, ಅಪಾರ ಪ್ರಮಾಣದ ಸಸ್ಯ ಸಂಪತ್ತು, ವನ್ಯಜೀವಿಗಳು ಬೆಂಕಿಗೆ ಆಹುತಿಯಾಗಿದ್ದು, ಇದು ಆತಂಕಕ್ಕೆ ಕಾರಣವಾಗಿದೆ.

ಅಗ್ನಿಶಾಮಕ ದಳದ ಸಿಬ್ಬಂದಿ, ಅರಣ್ಯ ಇಲಾಖೆಯ ಸಿಬ್ಬಂದಿ ಬೆಂಕಿ ನಂದಿಸಲು ಸತತವಾಗಿ ಕಾರ್ಯಾಚರಣೆ ನಡೆಸುತ್ತಿದ್ದು, ಸ್ಥಳೀಯರು ಕೂಡ ಸಾಥ್ ನೀಡಿದ್ದಾರೆ. ಆದರೂ ಬೆಂಕಿ ನಿಯಂತ್ರಣಕ್ಕೆ ಸಿಗದಂತಾಗಿದೆ.

ಕಿಡಿಗೇಡಿಗಳು ಹಚ್ಚಿದ ಬೆಂಕಿಯಿಂದ ಕಳೆದ ಬಾರಿ ಸುಮಾರು 700 ಎಕರೆಯಷ್ಟು ಅರಣ್ಯ ಪ್ರದೇಶ ಹಾನಿಗೊಳಗಾಗಿತ್ತು. ಈ ಬಾರಿಯೂ ಭಾರೀ ಪ್ರಮಾಣದಲ್ಲಿ ಬೆಂಕಿ ವ್ಯಾಪಿಸಿದೆ. ಈ ಪ್ರದೇಶದಲ್ಲಿ ಒಣಗಿದ ಬಿದಿರು ಜಾಸ್ತಿ ಇದೆ. ಕಾಡಿನೊಳಗೆ ವಾಹನ ಪ್ರವೇಶಿಸಲು ಸಾಧ್ಯವಾಗದ ಕಾರಣ, ಬೇರೆ ಕಡೆಗೆ ಬೆಂಕಿ ವ್ಯಾಪಿಸದಂತೆ ಕ್ರಮ ಕೈಗೊಳ್ಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...