alex Certify
ಕನ್ನಡ ದುನಿಯಾ       Mobile App
       

Kannada Duniya

ಶಾರ್ಟ್ ಸರ್ಕ್ಯೂಟ್ ನಿಂದಾಗಿ ಲಕ್ಷಾಂತರ ರೂ. ಮೌಲ್ಯದ ಪೀಠೋಪಕರಣ ಭಸ್ಮ

ಶಿವಮೊಗ್ಗ: ಸಾವಯವ ಕೃಷಿಯಲ್ಲಿ ಸಾಧನೆ ಮಾಡಿದ ದುಮ್ಮಳ್ಳಿ ಶಿವಮ್ಮ ಅವರ ಮನೆಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಸಂಭವಿಸಿದ ಬೆಂಕಿಯಿಂದಾಗಿ ಲಕ್ಷಾಂತರ ರೂ. ಮೌಲ್ಯದ ಪೀಠೋಪಕರಣಗಳು ಸುಟ್ಟು ಹೋಗಿವೆ.

ಇಂದು ಬೆಳಿಗ್ಗೆ ಮನೆಯೊಳಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಏಕಾಏಕಿ ಬೆಂಕಿ ತಗುಲಿದ್ದು, ಕ್ಷಣಾರ್ಧದಲ್ಲಿ ಇಡೀ ಮನೆಗೆ ಬೆಂಕಿ ವ್ಯಾಪಿಸಿ ಧಗಧಗನೆ ಹೊತ್ತಿ ಉರಿದಿದೆ.

ಇದರಿಂದಾಗಿ ಶಿವಮ್ಮ ಅವರ ಮನೆಯಲ್ಲಿದ್ದ ಪೀಠೋಪಕರಣ, ಎಲೆಕ್ಟ್ರಾನಿಕ್ ಉಪಕರಣ, ಪ್ರಶಸ್ತಿ ಪತ್ರಗಳು, ಸ್ಮರಣಿಕೆಗಳು ಸುಟ್ಟು ಕರಕಲಾಗಿದೆ. ಸುದ್ದಿ ತಿಳಿದು ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು.

ಸುಮಾರು 8 ಲಕ್ಷ ರೂ.ಗೂ ಅಧಿಕ ಮೌಲ್ಯದ ವಿವಿಧ ವಸ್ತುಗಳು ಹಾನಿಗೀಡಾಗಿವೆ ಎಂದು ಅಂದಾಜಿಸಲಾಗಿದೆ. ಸಾವಯವ ಕೃಷಿಯಲ್ಲಿ ತೋರಿದ ಸಾಧನೆಗಾಗಿ ದುಮ್ಮಳ್ಳಿ ಶಿವಮ್ಮ ಅವರಿಗೆ ಕೃಷಿ ಸಾಧಕ ಪ್ರಶಸ್ತಿ ದೊರಕಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...