alex Certify
ಕನ್ನಡ ದುನಿಯಾ       Mobile App
       

Kannada Duniya

ಬಟ್ಟೆ ಬಿಚ್ಚಿಸಿ ಅವಮಾನಿಸಿದ್ದಕ್ಕಾಗಿ ಆತ್ಮಹತ್ಯೆಗೆತ್ನಿಸಿದ್ದ ಯುವತಿ ಸಾವು

fire ballari

ಬಳ್ಳಾರಿ: ಮನೆ ಕೆಲಸ ಮಾಡುವ ಯುವತಿಯ ಮೇಲೆ, ಕಳ್ಳತನ ಆರೋಪ ಹೊರಿಸಿ, ಬಟ್ಟೆ ಬಿಚ್ಚಿಸಿ ಪರಿಶೀಲನೆ ನಡೆಸಿದ್ದು, ಇದರಿಂದ ಮನನೊಂದ ಯುವತಿ ಆತ್ಮಹತ್ಯೆಗೆ ಯತ್ನಿಸಿದ್ದ ಘಟನೆ ಕಳೆದ ವಾರ ಬಳ್ಳಾರಿಯಲ್ಲಿ ನಡೆದಿತ್ತು. ಆಸ್ಪತ್ರೆಗೆ ದಾಖಲಾಗಿದ್ದ ಯುವತಿ ಈಗ ಸಾವು ಕಂಡಿದ್ದಾಳೆ.

ಇಲ್ಲಿನ ಉದ್ಯಮಿಯೊಬ್ಬರ ಮನೆಗೆ ಮಹಿಳೆಯೊಬ್ಬರು ಕೆಲಸಕ್ಕೆ ಹೋಗುತ್ತಿದ್ದು, ಆಕೆಗೆ ಹುಷಾರಿಲ್ಲದ ಕಾರಣ, ಮಗಳನ್ನು ಕೆಲಸಕ್ಕೆ ಕಳುಹಿಸಿದ್ದರು. ಯುವತಿ ಕೆಲಸಕ್ಕೆ ಬಂದ ಸಂದರ್ಭದಲ್ಲಿ ಮನೆಯಲ್ಲಿದ್ದ ಉಂಗುರಗಳು ಕಾಣೆಯಾಗಿವೆ ಎಂದು ಆರೋಪಿಸಿ, ಉದ್ಯಮಿಯ ಪುತ್ರ, ಆಕೆಯ ಬಟ್ಟೆ ಬಿಚ್ಚಿಸಿ ಪರಿಶೀಲನೆ ನಡೆಸಿದ್ದ ಎನ್ನಲಾಗಿದೆ. ಇದರಿಂದ ಮನನೊಂದ ಯುವತಿ, ಮೈಮೇಲೆ ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಳು.

ಆಕೆಯನ್ನು ಬಳ್ಳಾರಿ ವಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೇ, ಯುವತಿ ಮೃತಪಟ್ಟಿದ್ದಾಳೆ. ಘಟನೆಗೆ ಕಾರಣರಾದವರನ್ನು ಬಂಧಿಸಬೇಕೆಂದು ಒತ್ತಾಯಿಸಿ ವಿಮ್ಸ್ ಶವಾಗಾರದ ಎದುರು ಸಂಬಂಧಿಕರು, ವಿವಿಧ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...