alex Certify
ಕನ್ನಡ ದುನಿಯಾ       Mobile App
       

Kannada Duniya

ಬೆಂಕಿ ಹಚ್ಚಿಕೊಂಡು ಪತ್ನಿಯನ್ನು ತಬ್ಬಿಕೊಂಡ ಕುಡುಕ ಪತಿ

ಮೊದಲೇ ಕುಡಿದುಕೊಂಡು ಬಂದಿದ್ದ ಪತಿಯೊಬ್ಬ ಮತ್ತೆ ಮದ್ಯ ಸೇವಿಸಲು ಪತ್ನಿ ಹಣ ನೀಡಲಿಲ್ಲವೆಂಬ ಕಾರಣಕ್ಕೆ ಬೆಂಕಿ ಹಚ್ಚಿಕೊಂಡು ಪತ್ನಿಯನ್ನು ತಬ್ಬಿಕೊಂಡಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.

ಕೊರಟಗೆರೆ ತಾಲೂಕಿನ ಕರೇದುಗ್ಗನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಮದ್ಯ ಸೇವನೆಗೆ ಹಣಕ್ಕಾಗಿ ಪೀಡಿಸುತ್ತಿದ್ದ 40 ವರ್ಷದ ಲೋಕೇಶ್ ಎಂಬಾತ ಪತ್ನಿ ಮರಿಬಸಮ್ಮ ಹಣ ನೀಡಲು ನಿರಾಕರಿಸಿದಾಗ ಮೈಮೇಲೆ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾನೆ.

ಬಳಿಕ ಪತ್ನಿ ಮರಿಬಸಮ್ಮಳನ್ನು ತಬ್ಬಿಕೊಂಡಿದ್ದು, ತೀವ್ರ ಸುಟ್ಟಗಾಯಗಳಿಂದ ಲೋಕೇಶ್ ಸಾವನ್ನಪ್ಪಿದ್ದರೆ ಆತನ ಪತ್ನಿ ಮರಿಬಸಮ್ಮ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾಳೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...