alex Certify
ಕನ್ನಡ ದುನಿಯಾ       Mobile App
       

Kannada Duniya

ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ಬೆಂಕಿ; ಎದ್ದುಬಿದ್ದು ಓಡಿದ ಮದ್ಯಪ್ರಿಯರು

ಪ್ರತಿಷ್ಠಿತ ಬಾರ್ ಅಂಡ್ ರೆಸ್ಟೋರೆಂಟ್ ಒಂದರಲ್ಲಿ ತಡರಾತ್ರಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಅಲ್ಲಿದ್ದ ಮದ್ಯಪ್ರಿಯರು ಭೀತಿಯಿಂದ ಎದ್ದು ಬಿದ್ದು ಓಡಿದ ಘಟನೆ ತುಮಕೂರಿನಲ್ಲಿ ನಡೆದಿದೆ.

ತುಮಕೂರಿನ ಬಿ.ಹೆಚ್. ರಸ್ತೆಯಲ್ಲಿರುವ ವೈಶಾಲಿ ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿ ನಂತರ ಹೋಟೆಲ್ ನ ಎಲ್ಲಾ ಭಾಗದಲ್ಲೂ ಹರಡಿ, ದಟ್ಟವಾಗಿ ಹೊಗೆ ತುಂಬಿಕೊಂಡ ಕಾರಣ ಅಲ್ಲಿದ್ದ ನೂರಾರು ಮದ್ಯಪ್ರಿಯರು ಕಾಲಿಗೆ ಬುದ್ಧಿ ಹೇಳಿದ್ದಾರೆ.

ಬಹುತೇಕರು ಬಿಲ್ ಕೊಡದೆ ಹೋಗಿರುವುದು ಹಾಗೂ ಪೀಠೋಪಕರಣ ಸೇರಿದಂತೆ ಹಲವು ವಸ್ತುಗಳು ಸುಟ್ಟು ಭಸ್ಮವಾಗಿರುವುದು ಮಾಲೀಕರಿಗೆ ನಷ್ಟವನ್ನುಂಟು ಮಾಡಿದೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿಯನ್ನು ನಂದಿಸುವ ಮೂಲಕ ಇನ್ನೂ ಹೆಚ್ಚಿನ ನಷ್ಟವನ್ನು ತಪ್ಪಿಸಿದ್ದಾರೆ.

ಅಡುಗೆ ಮನೆಯಲ್ಲಿನ ಬೆಂಕಿಯ ಕಿಡಿ ಹಾಗೂ ಚಿಮಣಿಯಲ್ಲಿ ಶೇಖರಣೆಯಾಗಿದ್ದ ಅಪಾರ ಪ್ರಮಾಣದ ಜಿಡ್ಡು ಈ ಅವಘಡಕ್ಕೆ ಕಾರಣವೆಂದು ಹೇಳಲಾಗುತ್ತಿದ್ದು, ತುಮಕೂರು ಹೊಸ ಬಡಾವಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...