alex Certify
ಕನ್ನಡ ದುನಿಯಾ       Mobile App
       

Kannada Duniya

ಅಕ್ಕಿ ಮೂಟೆಗಳ ಸಮೇತ ಭಸ್ಮವಾಯ್ತು ಲಾರಿ

ದಾವಣಗೆರೆ: ನಿಂತಿದ್ದ ಲಾರಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಘಟನೆ ದಾವಣಗೆರೆ ಸಮೀಪದ ಹೆಬ್ಬಾಳು ಬಳಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಅಕ್ಕಿ ತುಂಬಿದ್ದ ಲಾರಿಯನ್ನು ನಿಲ್ಲಿಸಲಾಗಿದ್ದು, ಚಾಲಕ ಊಟಕ್ಕೆ ತೆರಳಿದ್ದಾನೆ. ಈ ವೇಳೆ ಆಕಸ್ಮಿಕವಾಗಿ ತಗುಲಿದ ಬೆಂಕಿ ಇಡೀ ಲಾರಿಗೆ ವ್ಯಾಪಿಸಿದ್ದು, ಅಕ್ಕಿ ಮೂಟೆಗಳ ಸಮೇತ ಸುಟ್ಟು ಹೋಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ.

ಬೆಂಗಳೂರಿನಿಂದ ಮುಂಬೈ ಕಡೆಗೆ ಹೊರಟಿದ್ದ ಲಾರಿಯಲ್ಲಿ ಲಕ್ಷಾಂತರ ರೂ ಮೌಲ್ಯದ ಅಕ್ಕಿ ಮೂಟೆಗಳಿದ್ದು, ಎಲ್ಲಾ ಸುಟ್ಟು ಭಸ್ಮವಾಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ದಾವಣಗೆರೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಇಂಜಿನ್ ನಲ್ಲಿನ ದೋಷವೇ ಘಟನೆಗೆ ಕಾರಣವೆನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...