alex Certify
ಕನ್ನಡ ದುನಿಯಾ       Mobile App
       

Kannada Duniya

ಕೊಂಡ ಹಾಯ್ದ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್

ದಾವಣಗೆರೆ: ಪ್ರತಿ ವರ್ಷದಂತೆ ವೀರಭದ್ರೇಶ್ವರ ಸ್ವಾಮಿ ಜಾತ್ರೆಯಲ್ಲಿ ಕೆಂಡ ಹಾಯುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಹರಕೆ ತೀರಿಸಿದ್ದಾರೆ.

ಹಳೆಪೇಟೆಯ ಶ್ರೀ ವೀರಭದ್ರೇಶ್ವರ ಸ್ವಾಮಿ ಕೆಂಡಾರ್ಚನೆ ವೇಳೆ ಮಲ್ಲಿಕಾರ್ಜುನ್ ಕುಟುಂಬ ಸಮೇತರಾಗಿ ಆಗಮಿಸಿ ಕೊಂಡ ಹಾಯುತ್ತಾರೆ. ಅಂತೆಯೇ ಈ ಬಾರಿಯೂ ಕುಟುಂಬ ಸಮೇತರಾಗಿ ಆಗಮಿಸಿ ವಿಶೇಷ ಪೂಜೆ ನೆರವೇರಿಸಿದ ಅವರು ಕೊಂಡ ಹಾಯ್ದು ಹರಕೆ ತೀರಿಸಿದ್ದಾರೆ.

ಈ ಬಾರಿ ವಿಧಾನಸಭೆ ಚುನಾವಣೆ ಘೋಷಣೆಯಾಗಿದೆ. ಎಸ್.ಎಸ್. ಮಲ್ಲಿಕಾರ್ಜುನ್ ಈಗಾಗಲೇ ಪ್ರಚಾರ ಶುರು ಮಾಡಿದ್ದು, ಗೆಲುವಿಗೆ ಕಾರ್ಯತಂತ್ರ ರೂಪಿಸುತ್ತಿದ್ದಾರೆ. ಇದೇ ವೇಳೆ ಕೊಂಡ ಹಾಯುವ ಮೂಲಕ ಹರಕೆ ಸಲ್ಲಿಸಿದ್ದಾರೆ.

ಕೊಂಡಾ ಹಾಯುವುದು ಮೂಢನಂಬಿಕೆ ಅಲ್ಲ. ಕೊಂಡ ಹಾಯಲು ಯಾರಿಗೂ ಬಲವಂತ ಮಾಡುವಂತಿಲ್ಲ ಎಂದು ಮಲ್ಲಿಕಾರ್ಜುನ್ ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...