alex Certify
ಕನ್ನಡ ದುನಿಯಾ       Mobile App
       

Kannada Duniya

ಆಕಸ್ಮಿಕವಾಗಿ ಗುಂಡು ಹಾರಿಸಿದ ಮಗು

bullet-vector--bullet-in-fire_297-72ಮಗುವೊಂದು ಪಿಸ್ತೂಲಿನೊಂದಿಗೆ ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಅದರಿಂದ ಗುಂಡು ಹಾರಿದ ಪರಿಣಾಮ ವ್ಯಕ್ತಿಯೊಬ್ಬರ ಕುತ್ತಿಗೆಗೆ ಗುಂಡು ತಗುಲಿರುವ ಘಟನೆ ನಡೆದಿದೆ.

ಬೆಂಗಳೂರಿನ ಪೀಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಇಂದು ಬೆಳಿಗ್ಗೆ ಮುನಿರಾಜು ಎಂಬವರ ಮನೆಗೆ ಗೋವಿಂದಪ್ಪನವರು ಹೋಗಿದ್ದು, ಈ ಸಂದರ್ಭದಲ್ಲಿ ಮುನಿರಾಜು ಅವರ ಮೊಮ್ಮಗ ಪಾಂಡುರಂಗ ಪಿಸ್ತೂಲಿನೊಂದಿಗೆ ಆಟವಾಡುತ್ತಿದ್ದನೆಂದು ಹೇಳಲಾಗಿದೆ.

ಈ ಸಂದರ್ಭದಲ್ಲಿ ಆಕಸ್ಮಿಕವಾಗಿ ಪಿಸ್ತೂಲಿನಿಂದ ಗುಂಡು ಹಾರಿದ್ದು, ಗೋವಿಂದಪ್ಪನವರ ಕುತ್ತಿಗೆಗೆ ಗುಂಡು ತಗುಲಿದೆ. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...