alex Certify
ಕನ್ನಡ ದುನಿಯಾ       Mobile App
       

Kannada Duniya

ಪುಂಡಾಟಿಕೆ ನಡೆಸಿದ್ದವನ ಮೇಲೆ ಫೈರಿಂಗ್

ತನ್ನ ಸ್ನೇಹಿತರೊಂದಿಗೆ ಸೇರಿ ಪುಂಡಾಟಿಕೆ ನಡೆಸಿದ್ದ ವ್ಯಕ್ತಿಯನ್ನು ಬಂಧಿಸಲು ಪೊಲೀಸರು ತೆರಳಿದ್ದ ವೇಳೆ, ಅವರ ಮೇಲೆಯೇ ಮಚ್ಚಿನಿಂದ ಹಲ್ಲೆ ನಡೆಸಲು ಯತ್ನಿಸಿದಾಗ ಕಾಲಿಗೆ ಗುಂಡು ಹಾರಿಸಿ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ.

ಬೆಂಗಳೂರಿನ ಕೆ.ಪಿ. ಅಗ್ರಹಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳೆದ ರಾತ್ರಿ ಈ ಘಟನೆ ನಡೆದಿದ್ದು, ಜುಲೈ 25 ರಂದು ಶಶಿಕಿರಣ್ ಎಂಬಾತ ಸಾರ್ವಜನಿಕವಾಗಿಯೇ ಪುಂಡಾಟಿಕೆ ಮೆರೆದಿದ್ದು ಆತಂಕ ಹುಟ್ಟಿಸಿದ್ದ.

ಶಶಿಕಿರಣ್ ಕೆ.ಪಿ. ಅಗ್ರಹಾರ ರೈಲ್ವೆ ಬ್ರಿಡ್ಜ್ ಬಳಿ ಇರುವ ಮಾಹಿತಿ ಪಡೆದಿದ್ದ ಪೊಲೀಸರು, ಆತನ ಬಂಧನಕ್ಕೆ ತೆರಳಿದ್ದರು. ಈ ವೇಳೆ ಆರೋಪಿ, ಮಚ್ಚಿನಿಂದ ಮುಖ್ಯಪೇದೆ ನಾಗರಾಜಪ್ಪ ಎಂಬವರ ಮೇಲೆ ಹಲ್ಲೆ ನಡೆಸಿದ್ದು, ಆಗ ಕೆ.ಪಿ. ಅಗ್ರಹಾರ ಠಾಣೆ ಇನ್ಸ್ಪೆಕ್ಟರ್ ಮಂಜು ಶಶಿಕಿರಣ್ ಕಾಲಿಗೆ ಗುಂಡು ಹಾರಿಸಿದ್ದಾರೆ. ಗಾಯಗೊಂಡಿರುವ ಆರೋಪಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...