alex Certify
ಕನ್ನಡ ದುನಿಯಾ       Mobile App
       

Kannada Duniya

ಕಾಡುಹಂದಿ ಬೇಟೆಗೆ ಹೋದವ ತಾನೇ ಬಲಿಯಾದ…!

ಮೈಸೂರು: ಕಾಡುಹಂದಿ ಬೇಟೆಗೆಂದು ಹೋಗಿದ್ದ ವ್ಯಕ್ತಿ ಗುಂಡೇಟು ತಗುಲಿ ಸಾವನ್ನಪ್ಪಿದ ಘಟನೆ ಮೈಸೂರಿನ ಹಾರೋಹಳ್ಳಿಯಲ್ಲಿ ನಡೆದಿದೆ.

ಶಿವಣ್ಣ(55) ಮೃತಪಟ್ಟವರೆಂದು ಗುರುತಿಸಲಾಗಿದೆ. ಬೆಳಿಗ್ಗೆ ಗುಂಡೇಟು ತಗುಲಿ ವ್ಯಕ್ತಿ ಮೃತಪಟ್ಟಿರುವ ಮಾಹಿತಿ ಲಭ್ಯವಾಗಿದ್ದು, ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ರಾತ್ರಿ ಸ್ನೇಹಿತರೊಂದಿಗೆ ಕಾಡುಹಂದಿ ಬೇಟೆಗೆ ತೆರಳಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಹಾರಿದ ಗುಂಡು, ಶಿವಣ್ಣರ ಎದೆ ಮತ್ತು ಹೊಟ್ಟೆಗೆ ತಗುಲಿ ಅವರು ಸಾವನ್ನಪ್ಪಿದ್ದಾರೆ.

ಅವರೊಂದಿಗೆ ಹೋದವರು ಮೃತದೇಹವನ್ನು ಹಾರೋಹಳ್ಳಿಯ ಬಳಿ ಎಸೆದು ಹೋಗಿರಬಹುದೆಂದು ಶಂಕಿಸಲಾಗಿದೆ. ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...