alex Certify
ಕನ್ನಡ ದುನಿಯಾ       Mobile App
       

Kannada Duniya

ಬೆಂಗಳೂರಿನಲ್ಲಿ ರೌಡಿ ಶೀಟರ್ ಮೇಲೆ ಪೊಲೀಸರಿಂದ ಫೈರಿಂಗ್

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಗುಂಡಿನ ಸದ್ದು ಮೊಳಗಿದೆ. ರೌಡಿ ಶೀಟರ್ ಶರಣ್ ಅಲಿಯಾಸ್ ತರುಣ್ ಎಂಬಾತನನ್ನು ಪೊಲೀಸರು ಬಂಧಿಸಲು ತೆರಳಿದ್ದ ವೇಳೆ ಈ ಘಟನೆ ನಡೆದಿದೆ.

ಮೇ 21 ರಂದು ನಡೆದಿದ್ದ ಹಲ್ಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಪೊಲೀಸರು ಶರಣ್ ನನ್ನು ಬಂಧಿಸಲು ತೆರಳಿದ್ದ ವೇಳೆ ಆತನ ಗ್ಯಾಂಗ್ ಸದಸ್ಯರು ಪೊಲೀಸರ ಮೇಲೆಯೇ ದಾಳಿ ಮಾಡಿದ್ದಾರೆ.

ಆಗ ಸ್ವಯಂ ರಕ್ಷಣೆಗಾಗಿ ವಿಜಯನಗರ ಠಾಣೆಯ ಇನ್ಸ್ಪೆಕ್ಟರ್ ನಾಗೇಶ್ ಗುಂಡು ಹಾರಿಸಿದ್ದು, ಎರಡು ಗುಂಡುಗಳು ರೌಡಿಶೀಟರ್ ಶರಣ್ ಗೆ ತಗುಲಿವೆ ಎನ್ನಲಾಗಿದೆ.

ರೌಡಿಗಳ ದಾಳಿಯಲ್ಲಿ ಪೇದೆ ಶ್ರೀನಿವಾಸಮೂರ್ತಿ ಎಂಬವರಿಗೂ ಗಾಯಗಳಾಗಿದ್ದು, ಅವರಿಗೆ ಚಿಕಿತ್ಸೆ ಕೊಡಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...