alex Certify
ಕನ್ನಡ ದುನಿಯಾ       Mobile App
       

Kannada Duniya

ಹಲಸೂರು ಕೆರೆಯಲ್ಲಿ ಮೀನುಗಳ ಮಾರಣಹೋಮ

deadfish

ಬೆಂಗಳೂರಿನ ಹಲಸೂರು ಕೆರೆಯಲ್ಲಿ ಸಾವಿರಾರು ಮೀನುಗಳು ಸಾವನ್ನಪ್ಪಿದ್ದು, ಇದರಿಂದ ಉಂಟಾಗಿರುವ ದುರ್ವಾಸನೆಯ ಕಾರಣಕ್ಕೆ ಸುತ್ತಮುತ್ತಲಿನ ನಿವಾಸಿಗಳು ತೊಂದರೆಗೊಳಗಾಗಿದ್ದಾರೆ.

ಇಂದು ಬೆಳಿಗ್ಗೆ ಸಾವಿರಾರು ಸಂಖ್ಯೆಯಲ್ಲಿ ಸತ್ತಿದ್ದ ಮೀನುಗಳು ಕೆರೆಯಲ್ಲಿ ತೇಲುತ್ತಿರುವುದು ಕಂಡು ಬಂದಿದೆ. ಕೆರೆಯ ನೀರನ್ನು ಸ್ವಚ್ಚಗೊಳಿಸಲು ಬಳಸಿದ ರಾಸಾಯನಿಕದಿಂದ ಮೀನುಗಳಿಗೆ ಆಮ್ಲಜನಕದ ಕೊರತೆಯುಂಟಾಗಿ ಸಾವನ್ನಪ್ಪಿರಬಹುದೆಂದು ಶಂಕಿಸಲಾಗಿದೆ.

ಸತ್ತ ಮೀನುಗಳ ದುರ್ವಾಸನೆಯಿಂದಾಗಿ ಸುತ್ತ ಮುತ್ತಲಿನ ನಿವಾಸಿಗಳು ಹಾಗೂ ವಾಹನ ಸವಾರರು ಮೂಗು ಮುಚ್ಚಿಕೊಂಡು ಓಡಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಅಧಿಕಾರಿಗಳು ಕೂಡಲೇ ಸತ್ತ ಮೀನುಗಳನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಮನವಿ ಮಾಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...