alex Certify
ಕನ್ನಡ ದುನಿಯಾ       Mobile App
       

Kannada Duniya

ನೆರೆಪೀಡಿತ ಪ್ರದೇಶಗಳಿಗೆ 6 ಸದಸ್ಯರ ಕೇಂದ್ರ ತಂಡದ ಭೇಟಿ

ರಾಜ್ಯದಲ್ಲಿ ವಿಪರೀತ ಮಳೆಯಿಂದ ತತ್ತರಿಸಿರುವ ಕೊಡಗು, ದಕ್ಷಿಣ ಕನ್ನಡ, ಉಡುಪಿ ಮತ್ತು ಹಾಸನ ಜಿಲ್ಲೆಗಳಿಗೆ ಕೇಂದ್ರ ಸರಕಾರದ ಉನ್ನತ ಮಟ್ಟದ ತಂಡವು ಸೆ.12 ಮತ್ತು 13 ರಂದು ಭೇಟಿ ನೀಡಲಿದೆ.

ಕೇಂದ್ರ ಗೃಹ ಸಚಿವಾಲಯದ ಜಂಟಿ ಕಾರ್ಯದರ್ಶಿ ಅನಿಲ್ ಮಲ್ಲಿಕ್ ನೇತೃತ್ವದಲ್ಲಿ 6 ಸದಸ್ಯರ ತಂಡವು ನಾಳೆ (ಮಂಗಳವಾರ) ಬೆಂಗಳೂರಿಗೆ ಆಗಮಿಸುತ್ತಿದೆ.

ಈ ತಂಡದ ಮೂವರು ಸದಸ್ಯರು ಕೊಡಗಿಗೆ ಭೇಟಿ ನೀಡಲಿದ್ದರೆ, ಉಳಿದ ಮೂವರು ಸದಸ್ಯರು ದಕ್ಷಿಣ ಕನ್ನಡ, ಹಾಸನ ಮತ್ತು ಉಡುಪಿ ಜಿಲ್ಲೆಗಳಿಗೆ ತೆರಳಲಿದ್ದಾರೆ. ಈ ಸದಸ್ಯರು ಎಲ್ಲ ಜಿಲ್ಲೆಗಳಲ್ಲೂ ನೆರೆಪೀಡಿತ ಪ್ರದೇಶಗಳಿಗೆ ತೆರಳಿ ಆಗಿರುವ ಹಾನಿಯನ್ನು ಅವಲೋಕಿಸಲಿದ್ದಾರೆ.

ಸೆ.14 ರಂದು ಕೇಂದ್ರ ತಂಡವು ರಾಜ್ಯ ಸರಕಾರದ ಸಚಿವರುಗಳು ಮತ್ತು ಮುಖ್ಯ ಕಾರ್ಯದರ್ಶಿಗಳೊಂದಿಗೆ ನೆರೆ ಹಾನಿ ಕುರಿತು ವಿಚಾರ ವಿನಿಮಯ ನಡೆಸಲಿದೆ. ಬಳಿಕ ಈ ತಂಡವು ತನ್ನ ವರದಿಯನ್ನು ಕೇಂದ್ರ ಸರಕಾರಕ್ಕೆ ಸಲ್ಲಿಸಲಿದೆ.

ರಾಜ್ಯದಲ್ಲಿ ಮಳೆಯಿಂದ ಆಗಿರುವ ಹಾನಿ ಕುರಿತು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ಇಂದು ದೆಹಲಿಗೆ ತೆರಳಿದ್ದ ನಿಯೋಗವು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಮನವಿ ಸಲ್ಲಿಸಿ, ಪರಿಹಾರ ಹಣ ಬಿಡುಗಡೆ ಮಾಡುವಂತೆ ಕೋರಿರುವ ಹಿನ್ನೆಲೆಯಲ್ಲಿ ಕೇಂದ್ರ ಸರಕಾರವು ಈ ತಂಡವನ್ನು ಕಳಿಸುತ್ತಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...