alex Certify
ಕನ್ನಡ ದುನಿಯಾ       Mobile App
       

Kannada Duniya

ಎಸ್.ಎಂ.ಕೃಷ್ಣ ಬಿಜೆಪಿ ಸೇರ್ಪಡೆ ಖಚಿತ : ಬಿ ಎಸ್ ವೈ

krishna-yeddyurappa_650x400_61485781550

ಇತ್ತೀಚೆಗಷ್ಟೆ ಕಾಂಗ್ರೆಸ್ ತೊರೆದಿರುವ ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ  ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದಾರೆ ಅಂತಾ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಕೃಷ್ಣ ಕಮಲ ಪಕ್ಷ ಸೇರುತ್ತಿರುವುದು ಶೇ.100ಕ್ಕೆ ನೂರರಷ್ಟು ಖಚಿತ, ಆದ್ರೆ ಸಮಯ ಇನ್ನೂ ನಿಗದಿಯಾಗಿಲ್ಲ ಅಂತಾ ಬಿ ಎಸ್ ವೈ ಹೇಳಿದ್ದಾರೆ.

ಪಕ್ಷದಲ್ಲಿ ತಮ್ಮನ್ನು ಮೂಲೆಗುಂಪು ಮಾಡಲಾಗಿದೆ ಅಂತಾ ಬೇಸರಗೊಂಡು ಎಸ್.ಎಂ.ಕೃಷ್ಣ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡಿದ್ದರು. ಎಸ್ ಎಂ ಕೆ ಕಾಂಗ್ರೆಸ್ ತೊರೆದಿರುವ ಬಗ್ಗೆ ಸಿಎಂ ಸಿದ್ದರಾಮಯ್ಯ ಸೇರಿದಂತೆ ಕರ್ನಾಟಕದ ಅನೇಕ ಕೈನಾಯಕರು ಅಚ್ಚರಿ ವ್ಯಕ್ತಪಡಿಸಿದ್ದರು.

ಪಕ್ಷ ತೊರೆಯುವ ನಿರ್ಧಾರದಿಂದ ಹಿಂದೆ ಸರಿಯುವಂತೆ ಮನವಿ ಮಾಡಿದ್ದರು. ಆದ್ರೆ ಎಸ್.ಎಂ.ಕೃಷ್ಣ ಒಪ್ಪಿರಲಿಲ್ಲ. ಈ ಅವಕಾಶವನ್ನು ಬಳಸಿಕೊಂಡ ಯಡಿಯೂರಪ್ಪ, ಕೃಷ್ಣರನ್ನು ಬಿಜೆಪಿಗೆ ಆಹ್ವಾನಿಸಿದ್ದಾರೆ. ಕೃಷ್ಣ ಬಿಜೆಪಿಗೆ ಬಂದಲ್ಲಿ ಪಕ್ಷಕ್ಕೆ ಇನ್ನಷ್ಟು ಬಲ ಬರಲಿದೆ ಅಂತಾ ಯಡಿಯೂರಪ್ಪ ಅಭಿಪ್ರಾಯಪಟ್ಟಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...