alex Certify
ಕನ್ನಡ ದುನಿಯಾ       Mobile App
       

Kannada Duniya

ಜೈಲಲ್ಲೇ ಸಹಚರನೊಂದಿಗೆ ನಲಪಾಡ್ ಹ್ಯಾರಿಸ್ ಗಲಾಟೆ

ಬೆಂಗಳೂರು: ಉದ್ಯಮಿ ಪುತ್ರನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ಶಾಸಕ ಎನ್.ಎ. ಹ್ಯಾರಿಸ್ ಪುತ್ರ ಮಹಮ್ಮದ್ ನಲಪಾಡ್ ಹ್ಯಾರಿಸ್ ಹಾಗೂ ಆತನ ಸಹಚರರನ್ನು ಪರಪ್ಪನ ಅಗ್ರಹಾರ ಜೈಲಿಗೆ ಕಳಿಸಲಾಗಿದೆ.

ಜೈಲಿನಲ್ಲಿ ನಲಪಾಡ್ ಹ್ಯಾರಿಸ್ ಮತ್ತು ಎ 5 ಆರೋಪಿ ಮಹಮ್ಮದ್ ಅಶ್ರಫ್ ನಡುವೆ ಗಲಾಟೆ ನಡೆದಿದೆ. ನಿನ್ನಿಂದಲೇ ಜೈಲು ಸೇರುವಂತಾಯಿತು ಎಂದು ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಜಗಳವಾಗಿದೆ. ರಾತ್ರಿ ಜೈಲಿಗೆ ಬಂದ ವಿಚಾರವಾಗಿ ಇಬ್ಬರ ನಡುವೆ ಜಗಳವಾಗಿದೆ ಎಂದು ಹೇಳಲಾಗಿದೆ.

ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನಲೆಯಲ್ಲಿ ನಿನ್ನೆ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, 14 ದಿನಗಳ ನ್ಯಾಯಾಂಗ ಬಂಧನದ ಹಿನ್ನಲೆಯಲ್ಲಿ ಅವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಕಳಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...