alex Certify
ಕನ್ನಡ ದುನಿಯಾ       Mobile App
       

Kannada Duniya

ಸಾರ್ವಜನಿಕರ ಅಂತಿಮ ದರ್ಶನಕ್ಕೆ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಸಕಲ ಸಿದ್ಧತೆ

ಹಲವು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕೇಂದ್ರ ಸಚಿವ ಅನಂತ ಕುಮಾರ್, ಸೋಮವಾರ ಬೆಳಗಿನ ಜಾವ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದು, ಇಂದು ಅವರ ಪಾರ್ಥಿವ ಶರೀರದ ಅಂತ್ಯಸಂಸ್ಕಾರ ನೆರವೇರಲಿದೆ.

ಮಧ್ಯಾಹ್ನ 1 ಗಂಟೆ ಬಳಿಕ ಚಾಮರಾಜಪೇಟೆಯ ರುದ್ರಭೂಮಿಯಲ್ಲಿ ವಿಧಿವಿಧಾನದಂತೆ ಅನಂತ ಕುಮಾರ್ ಅವರ ಅಂತ್ಯಸಂಸ್ಕಾರ ನೆರವೇರಲಿದ್ದು, ಅದಕ್ಕೂ ಮುನ್ನ ಸಾರ್ವಜನಿಕರ ಅಂತಿಮ ದರ್ಶನಕ್ಕಾಗಿ ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಸಕಲ ಸಿದ್ಧತೆ ಮಾಡಲಾಗಿದೆ.

ಸಾರ್ವಜನಿಕರ ಜೊತೆ ಗಣ್ಯರು, ಅನಂತ ಕುಮಾರ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಆಗಮಿಸಲಿರುವ ಹಿನ್ನಲೆಯಲ್ಲಿ ನ್ಯಾಷನಲ್ ಕಾಲೇಜು ಮೈದಾನದ ಬಳಿ ಬಿಗಿ ಪೊಲೀಸ್ ಭದ್ರತೆಯನ್ನು ಏರ್ಪಡಿಸಲಾಗಿದೆ. ಅಂತಿಮ ದರ್ಶನದ ಬಳಿಕ ಮೆರವಣಿಗೆಯಲ್ಲಿ ಪಾರ್ಥಿವ ಶರೀರವನ್ನು ರುದ್ರಭೂಮಿಗೆ ಕೊಂಡೊಯ್ಯಲಾಗುವುದು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...