alex Certify
ಕನ್ನಡ ದುನಿಯಾ       Mobile App
       

Kannada Duniya

ಕಾಂಗ್ರೆಸ್ ಸಂಸದರೊಂದಿಗೆ ಉಪ ಮುಖ್ಯಮಂತ್ರಿ ಪರಮೇಶ್ವರ್ ಸಭೆ

ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರದ ಸಚಿವರುಗಳಾಗಿ ಉಭಯ ಪಕ್ಷಗಳ ಕೆಲ ಶಾಸಕರು ಪ್ರಮಾಣವಚನ ಸ್ವೀಕರಿಸಿದ ಬಳಿಕ, ಕಾಂಗ್ರೆಸ್ ಪಕ್ಷದಲ್ಲಿ ಅಸಮಾಧಾನ ಭುಗಿಲೆದ್ದಿದ್ದು, ಈ ಹಿನ್ನೆಲೆಯಲ್ಲಿ ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾಗಿರುವ ಜಿ. ಪರಮೇಶ್ವರ್ ತಮ್ಮ ಪಕ್ಷದ ಸಂಸದರ ಸಭೆ ಕರೆದಿದ್ದಾರೆ.

ಇಂದು ಸಂಜೆ 4 ಗಂಟೆಗೆ ಕೆಪಿಸಿಸಿ ಕಛೇರಿಯಲ್ಲಿ ಈ ಸಭೆ ನಡೆಯಲಿದ್ದು, ಕಾಂಗ್ರೆಸ್ ಪಕ್ಷದ ಲೋಕಸಭಾ ಹಾಗೂ ರಾಜ್ಯಸಭಾ ಸದಸ್ಯರು ಪಾಲ್ಗೊಳ್ಳಲಿದ್ದಾರೆಂದು ತಿಳಿದುಬಂದಿದೆ.

ಸಚಿವ ಸಂಪುಟ ರಚನೆಯ ಬಳಿಕ ಉದ್ಭವಿಸಿರುವ ಬಿಕ್ಕಟ್ಟಿನ ಕುರಿತು ಕಾಂಗ್ರೆಸ್ ಸಂಸದರೊಂದಿಗೆ ಪರಮೇಶ್ವರ್ ಚರ್ಚಿಸಲಿದ್ದು, ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಮಾಲೋಚಿಸಲಿದ್ದಾರೆ.

ಈ ಮಧ್ಯೆ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿರುವ ಶಾಸಕ ಬೈರತಿ ಬಸವರಾಜ್, ಸೋಮವಾರದಂದು 40 ಕ್ಕೂ ಅಧಿಕ ಶಾಸಕರು ಸಭೆ ಸೇರಲಿದ್ದು, ಸ್ಪಷ್ಟ ಸಂದೇಶವೊಂದನ್ನು ರವಾನಿಸುವುದಾಗಿ ತಿಳಿಸಿರುವುದು ರಾಜ್ಯ ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...