alex Certify
ಕನ್ನಡ ದುನಿಯಾ       Mobile App
       

Kannada Duniya

ಪಂಚರಾಜ್ಯಗಳ ಫಲಿತಾಂಶದ ಬಳಿಕ ಪರಮೇಶ್ವರ್ ಸ್ಥಾನ ಪಲ್ಲಟ..?

param-kpcc

ಬೆಂಗಳೂರು: ‘ಕಪ್ಪ ಕಾಣಿಕೆ’ ಡೈರಿಯಲ್ಲಿ ಹಲವರ ಹೆಸರು ಪ್ರಸ್ತಾಪವಾಗಿದ್ದು, ಕಾಂಗ್ರೆಸ್ ನಲ್ಲಿ ಸಂಚಲನ ಮೂಡಿಸಿತ್ತು. ಇದೇ ಸಂದರ್ಭದಲ್ಲಿ ನಡೆದ ಕಾಂಗ್ರೆಸ್ ಸಮನ್ವಯ ಸಮಿತಿ ಸಭೆಯಲ್ಲಿ ಕೆ.ಪಿ.ಸಿ.ಸಿ. ಅಧ್ಯಕ್ಷ ಡಾ. ಜಿ ಪರಮೇಶ್ವರ್ 4 ವರ್ಷ ಪೂರೈಸಿದ ಸಚಿವರನ್ನು ಕೈಬಿಟ್ಟು ಹೊಸ ಮುಖಗಳಿಗೆ ಆದ್ಯತೆ ನೀಡಬೇಕೆಂದು ಪ್ರಸ್ತಾಪಿಸಿದ್ದು, ಹಿರಿಯ ಸಚಿವರ ಅಸಮಾಧಾನಕ್ಕೆ ಕಾರಣವಾಗಿದೆ.

ತಮ್ಮ ಬದಲಾವಣೆಗೆ ಮುಂದಾಗಿದ್ದ ಪರಮೇಶ್ವರ್ ಅವರನ್ನು ಕೆ.ಪಿ.ಸಿ.ಸಿ. ಅಧ್ಯಕ್ಷ ಸ್ಥಾನದಿಂದ ಕೆಳಗೆ ಇಳಿಸಲು ಕೆಲವು ಹಿರಿಯ ಸಚಿವರು ಒತ್ತಡ ಹೇರಿದ್ದಾರೆ ಎನ್ನಲಾಗಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ಅವರೊಂದಿಗೆ ಈ ಕುರಿತು ಚರ್ಚಿಸಿದ್ದಾರೆ.

ಪರಮೇಶ್ವರ್ ಬದಲಿಗೆ ಲಿಂಗಾಯತ ಸಮುದಾಯಕ್ಕೆ ಸೇರಿದವರೊಬ್ಬರನ್ನು ಅಧ್ಯಕ್ಷರಾಗಿ ನೇಮಿಸುವ ಬಗ್ಗೆ ಸಿದ್ಧರಾಮಯ್ಯ ಆಸಕ್ತಿ ತೋರಿದ್ದಾರೆ. ಈ ನಡುವೆ ಡಿ.ಕೆ.ಶಿವಕುಮಾರ್ ಕೂಡ ಕೆ.ಪಿ.ಸಿ.ಸಿ. ಅಧ್ಯಕ್ಷ ಸ್ಥಾನ ವಹಿಸಿಕೊಳ್ಳುವ ಚಿಂತನೆಯಲ್ಲಿದ್ದಾರೆ ಎಂದು ಹೇಳಲಾಗಿದೆ. ಸಾಮಾನ್ಯವಾಗಿ ಕೆ.ಪಿ.ಸಿ.ಸಿ ಅಧ್ಯಕ್ಷರಾದವರು 4 ವರ್ಷಗಳಲ್ಲೇ ಬದಲಾಗುತ್ತಾರೆ. ಆದರೆ, ಪರಮೇಶ್ವರ್ ಅಧ್ಯಕ್ಷರಾಗಿ 6 ವರ್ಷ ಪೂರೈಸಿದೆ.

ಅಲ್ಲದೇ, ಕೆ.ಪಿ.ಸಿ.ಸಿ. ಅಧ್ಯಕ್ಷ ಸ್ಥಾನದ ಜೊತೆಗೆ ಗೃಹಸಚಿವರಾಗಿಯೂ ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರನ್ನು ಬದಲಾವಣೆ ಮಾಡಬೇಕೆಂದು ಕೆಲವು ಹಿರಿಯ ಸಚಿವರು ಒತ್ತಡ ಹಾಕಿದ್ದು, ಮಾರ್ಚ್ 11 ರ ನಂತರ ಪರಮೇಶ್ವರ್ ಸ್ಥಾನ ಪಲ್ಲಟವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಡೈರಿ ಬೆಳವಣಿಗೆ ಬಳಿಕ 4 ವರ್ಷ ಪೂರೈಸಿದ ಸಚಿವರನ್ನು ಸಂಪುಟದಿಂದ ಕೈ ಬಿಟ್ಟು, ಪಕ್ಷದ ಸಂಘಟನೆಗೆ ನಿಯೋಜಿಸಬೇಕೆಂದು ಪರಮೇಶ್ವರ್ ನೀಡಿದ್ದ ಸಲಹೆ ಅವರಿಗೆ ಕಂಟಕವಾದಂತಿದೆ. ಹಿರಿಯ ಸಚಿವರು ಅವರನ್ನೇ ಬದಲಾಯಿಸಲು ಮುಂದಾಗಿದ್ದಾರೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...