alex Certify
ಕನ್ನಡ ದುನಿಯಾ       Mobile App
       

Kannada Duniya

ಬಸ್ ಪಲ್ಟಿಯಾಗಿ ಮಹಿಳೆ ಸಾವು: 8 ಮಂದಿಗೆ ಗಾಯ

ಗದಗ: ಗದಗ ಜಿಲ್ಲೆ ಗಜೇಂದ್ರಗಡ ಸಮೀಪದ ಕೊಡಗಾನೂರು ಬಳಿ ಸರ್ಕಾರಿ ಬಸ್ ಪಲ್ಟಿಯಾಗಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ.

ಅಪಘಾತದಲ್ಲಿ 8 ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಗಜೇಂದ್ರಗಡ ಆಸ್ಪತ್ರೆಗೆ ಸೇರಿಸಲಾಗಿದೆ. ನಾಗಮ್ಮ ಮೃತಪಟ್ಟ ಮಹಿಳೆ.

ಬಸ್ ನಲ್ಲಿ 30 ಮಂದಿ ಪ್ರಯಾಣಿಕರಿದ್ದು, ಕೊಡಗಾನೂರು ಬಳಿ ಚಾಲಕನ ನಿಯಂತ್ರಣ ತಪ್ಪಿದ ಬಸ್ ಪಲ್ಟಿಯಾಗಿ ಬಿದ್ದಿದೆ. ಗಂಭೀರವಾಗಿ ಗಾಯಗೊಂಡಿದ್ದ ನಾಗಮ್ಮರನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯದಲ್ಲೇ ಮೃತಪಟ್ಟಿದ್ದಾರೆ.

ಆಂಬುಲೆನ್ಸ್ ಹಾಗೂ ಬೇರೆ ವಾಹನಗಳಲ್ಲಿ ಗಾಯಾಳುಗಳನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಜೇಂದ್ರಗಡ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...