alex Certify
ಕನ್ನಡ ದುನಿಯಾ       Mobile App
       

Kannada Duniya

2 ನೇ ದಿನಕ್ಕೆ ಕಾಲಿಟ್ಟ ಕಪ್ಪತಗುಡ್ಡ ಹೋರಾಟ

kapat

ಗದಗ: ಉತ್ತರ ಕರ್ನಾಟಕದ ಸಹ್ಯಾದ್ರಿ ಎಂದೇ ಹೇಳಲಾಗುವ, ಕಪ್ಪತಗುಡ್ಡ ಸಂರಕ್ಷಣೆಗಾಗಿ ನಡೆಯುತ್ತಿರುವ ಅಹೋರಾತ್ರಿ ಹೋರಾಟ 2 ನೇ ದಿನಕ್ಕೆ ಕಾಲಿಟ್ಟಿದೆ.

ಯೋಗದೊಂದಿಗೆ 2 ನೇ ದಿನದ ಹೋರಾಟ ಆರಂಭವಾಗಿದೆ. ತೋಂಟದಾರ್ಯ ಶ್ರೀಗಳ ನೇತೃತ್ವದಲ್ಲಿ ಗದಗದ ಗಾಂಧಿ ವೃತ್ತದಲ್ಲಿ ಧರಣಿ ನಡೆಯುತ್ತಿದ್ದು, ಅಪಾರ ಸಂಖ್ಯೆಯ ಜನ ಪಾಲ್ಗೊಂಡಿದ್ದಾರೆ.

ಮಠಾಧೀಶರು, ಪರಿಸರವಾದಿಗಳು, ರಾಜಕಾರಣಿಗಳು, ರಾಜ್ಯದ ವಿವಿಧ ಸಂಘಟನೆಗಳು ಹೋರಾಟಕ್ಕೆ ಸಾಥ್ ನೀಡಿದ್ದು, ವಿದ್ಯಾರ್ಥಿಗಳು ಕೂಡ ಭಾಗವಹಿಸಿದ್ದಾರೆ.

ಕಪ್ಪತಗುಡ್ಡವನ್ನು ಸಂರಕ್ಷಿತ ಮೀಸಲು ಅರಣ್ಯ ಪ್ರದೇಶವಾಗಿ ಘೋಷಿಸಬೇಕೆಂದು ಒತ್ತಾಯಿಸಿ ಹೋರಾಟ ನಡೆಯುತ್ತಿದ್ದು, ಸರ್ಕಾರದ ನಡೆಗೆ ತೋಂಟದಾರ್ಯ ಶ್ರೀಗಳು ಬೇಸರ ವ್ಯಕ್ತಪಡಿಸಿದ್ದಾರೆ.

ಹೋರಾಟದ 2 ನೇ ದಿನವಾದ ಇಂದು ವಿದ್ಯಾರ್ಥಿಗಳು ರಕ್ತದಲ್ಲಿ ಪತ್ರ ಬರೆಯಲು ಮುಂದಾಗಿದ್ದಾರೆ. ಬೈಕ್ ರ್ಯಾಲಿ, ರಸ್ತೆ ತಡೆ ಮೊದಲಾದ ರೀತಿಯಲ್ಲಿ ಹೋರಾಟ ನಡೆಸಲಾಗುವುದು ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...