alex Certify
ಕನ್ನಡ ದುನಿಯಾ       Mobile App
       

Kannada Duniya

ಮನೆಯಲ್ಲಿ ಮಲಗಿದ್ದವರ ಮೇಲೆ ಪೈಶಾಚಿಕ ಕೃತ್ಯ

ಗದಗ : ತಡರಾತ್ರಿ ಮನೆಯಲ್ಲಿ ಮಲಗಿದ್ದ ಕುಟುಂಬದ ಮೇಲೆ ದಾಳಿ ಮಾಡಿದ ದುಷ್ಕರ್ಮಿಗಳು, ಮಾರಕಾಸ್ತ್ರಗಳಿಂದ ಥಳಿಸಿದ ಘಟನೆ ಗದಗ ಜಿಲ್ಲೆ ಶಿರಹಟ್ಟಿ ತಾಲ್ಲೂಕಿನ ಬೆಳಗಟ್ಟಿ ಗ್ರಾಮದಲ್ಲಿ ನಡೆದಿದೆ.

ಘಟನೆಯಲ್ಲಿ ಒಬ್ಬರು ಸಾವನ್ನಪ್ಪಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. 32 ವರ್ಷದ ಸಣ್ಣಪ್ಪ ಹೊನ್ನಣ್ಣನವರ್ ಕೊಲೆಯಾದವರು. ಚಂದ್ರಕಾಂತ್, ಆಡಿವೆಪ್ಪ, ಹನುಮವ್ವ, ವೆಂಕಪ್ಪ, ರಂಗವ್ವ ಅವರು ಗಂಭೀರವಾಗಿ ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಗೆ ಸೇರಿಸಲಾಗಿದೆ.

ಸುಭಾಷ್ ಬಂಡಿ ಮತ್ತು ಆತನ ಸಹಚರರು ಇದ್ದ 30 ಮಂದಿಯ ತಂಡ ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದೆ. ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ಈ ಕೃತ್ಯ ನಡೆದಿದ್ದು, ಸ್ಥಳಕ್ಕೆ ಭೇಟಿ ನೀಡಿದ ಶಿರಹಟ್ಟಿ ಪೊಲೀಸರು ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

ಸಣ್ಣಪ್ಪರ ಸಹೋದರಿಯನ್ನು ಸುಭಾಷ್ ಮದುವೆಯಾಗಿದ್ದು, ದಂಪತಿ ನಡುವೆ ಕಲಹ ಉಂಟಾಗಿತ್ತು ಇದೇ ವಿಚಾರಕ್ಕೆ ಸುಭಾಷ್ ತನ್ನ ತಂಡದೊಂದಿಗೆ ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾನೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...