alex Certify
ಕನ್ನಡ ದುನಿಯಾ       Mobile App
       

Kannada Duniya

ಹಳ್ಳದಲ್ಲಿ ಕೊಚ್ಚಿಹೋದ ಸರ್ಕಾರಿ ಬಸ್

rain-rain-s

ಗದಗ: ಗದಗ ಜಿಲ್ಲೆಯಾದ್ಯಂತ ರಾತ್ರಿ ಸುರಿದ ಭಾರೀ ಮಳೆಗೆ ಹಳ್ಳಕೊಳ್ಳಗಳೆಲ್ಲಾ ತುಂಬಿ ಹರಿದಿದ್ದು, ಸರ್ಕಾರಿ ಬಸ್ ನೀರಿನ ರಭಸಕ್ಕೆ ಕೊಚ್ಚಿ ಹೋಗಿದೆ.

ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲ್ಲೂಕಿನ ದೊಡ್ಡೂರು ಗ್ರಾಮದ ಸಮೀಪದ ದೊಡ್ಡಹಳ್ಳದಲ್ಲಿ ಬಸ್ ಉರುಳಿ ಬಿದ್ದಿದೆ. ಬಸ್ ನಲ್ಲಿದ್ದ ಚಾಲಕ, ಕಂಡಕ್ಟರ್ ಹಾಗೂ ಮೂವರು ಪ್ರಯಾಣಿಕರನ್ನು ಗ್ರಾಮಸ್ಥರು ಹಗ್ಗದ ಸಹಾಯದಿಂದ ರಕ್ಷಿಸಿದ್ದಾರೆ.

ಹಳ್ಳದ ಸೇತುವೆ ಮೇಲೆ ಭಾರೀ ರಭಸದಿಂದ ನೀರು ಹರಿಯುತ್ತಿದ್ದ ಕಾರಣ ಚಾಲಕನ ನಿಯಂತ್ರಣ ತಪ್ಪಿದ ಬಸ್ ಹಳ್ಳಕ್ಕೆ ಉರುಳಿದೆ.

ಕೂಡಲೇ ಗ್ರಾಮಸ್ಥರು ನೆರವಿಗೆ ಧಾವಿಸಿದ್ದು, ಬಸ್ ನಲ್ಲಿದ್ದ ಐವರನ್ನು ರಕ್ಷಿಸಿದ್ದಾರೆ. ಈ ಬಸ್ ಲಕ್ಷ್ಮೇಶ್ವರದಿಂದ ಯಲ್ಲಾಪುರಕ್ಕೆ ಹೊರಟಿತ್ತು. ಲಕ್ಷ್ಮೇಶ್ವರ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...