alex Certify
ಕನ್ನಡ ದುನಿಯಾ       Mobile App
       

Kannada Duniya

ಸಿಕ್ಕಿಬಿದ್ದ ಪಂಪ್ ಸೆಟ್ ಕಳ್ಳರಿಗೆ ಧರ್ಮದೇಟು

ಗದಗ: ಜಮೀನಿನಲ್ಲಿ ಅಳವಡಿಸಿದ್ದ ಪಂಪ್ ಸೆಟ್ ಮೋಟರ್ ಗಳನ್ನು ಕಳವು ಮಾಡುತ್ತಿದ್ದ ಇಬ್ಬರನ್ನು ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಗದಗ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಶ್ಯಾಗೋಟಿ ಗ್ರಾಮದಲ್ಲಿ ಕೆಲವು ದಿನಗಳಿಂದ ಪಂಪ್ ಸೆಟ್ ಮೋಟರ್ ಕಳವು ಮಾಡಲಾಗುತ್ತಿದ್ದು, ರೈತರಲ್ಲಿ ಆತಂಕ ಮೂಡಿಸಿತ್ತು.

ರಾತ್ರಿ ವ್ಯಕ್ತಿಯೊಬ್ಬರ ಜಮೀನಿನಲ್ಲಿ ಕಳವಿಗೆ ಬಂದಿದ್ದ ಗಿರೀಶ್ ಮತ್ತು ಅರುಣ್ ಎಂಬುವವರನ್ನು ರೆಡ್ ಹ್ಯಾಂಡಾಗಿ ಹಿಡಿದ ಗ್ರಾಮಸ್ಥರು ಹಿಗ್ಗಾಮುಗ್ಗಾ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಕಳ್ಳರಿಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...