alex Certify
ಕನ್ನಡ ದುನಿಯಾ       Mobile App
       

Kannada Duniya

ಮೇಲ್ಛಾವಣಿ ಕುಸಿದು ಮೂವರ ದುರ್ಮರಣ

ಗದಗ: ಗದಗ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆ ಅವಾಂತರ ಸೃಷ್ಠಿಸಿದೆ. ಮನೆ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ.

ಗದಗ ಜಿಲ್ಲೆ ರೋಣ ತಾಲ್ಲೂಕಿನ ಗಜೇಂದ್ರಗಡದಲ್ಲಿ ಬೆಳಗಿನಜಾವ ದುರಂತ ಸಂಭವಿಸಿದ್ದು, ಮಲಗಿದ್ದಲ್ಲೇ ಅಜ್ಜಿ, ಮೊಮ್ಮಕ್ಕಳು ಪ್ರಾಣ ಕಳೆದುಕೊಂಡಿದ್ದಾರೆ.

ಮೆಹಬೂಬಿ(55), ಮುಸ್ಕಾನ್(8), ನಾಜಿಯಾ(12) ಮೃತಪಟ್ಟವರು. ನಿರಂತರ ಮಳೆಯಿಂದಾಗಿ ಗೋಡೆ ಹಸಿಯಾಗಿ, ಛಾವಣಿ ಕುಸಿದು ಬಿದ್ದಿದೆ. ದಾವಲಬಿ(58) ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

ಸ್ಥಳಕ್ಕೆ ತಾಲ್ಲೂಕು ಆಡಳಿತದ ಅಧಿಕಾರಿಗಳು, ಪೊಲೀಸರು ಭೇಟಿ ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...