alex Certify
ಕನ್ನಡ ದುನಿಯಾ       Mobile App
       

Kannada Duniya

ಮನೆ ಮುಂದೆ ನಿಲ್ಲಿಸಿದ್ದ ಕಾರಿಗೆ ಬೆಂಕಿ

car-f

ಗದಗ: ಮನೆ ಮುಂದೆ ನಿಲ್ಲಿಸಿದ್ದ ಕಾರಿಗೆ ದುಷ್ಕರ್ಮಿಗಳು, ಬೆಂಕಿ ಹಚ್ಚಿದ ಘಟನೆ ಗದಗ ಜಿಲ್ಲೆ ಬೆಟಗೇರಿಯಲ್ಲಿ ನಡೆದಿದೆ.

ನರಸಾಪುರ ಆಶ್ರಯ ಕಾಲೋನಿಯಲ್ಲಿ ಶಾಹಿದ್ ಅಹ್ಮದ್ ಕಾತರಕಿ ಎಂಬುವವರಿಗೆ ಸೇರಿದ ಕಾರನ್ನು ಮನೆ ಎದುರು ನಿಲ್ಲಿಸಲಾಗಿತ್ತು.

ಬೆಳಗಿನ ಜಾವ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದು, ಕಾರು ಸಂಪೂರ್ಣ ಸುಟ್ಟು ಹೋಗಿದೆ. ಬೆಟಗೇರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹನುಮಂತಪ್ಪ, ಮಂಜುನಾಥ್ ಸೇರಿದಂತೆ 6 ಮಂದಿ ಹಳೆ ದ್ವೇಷದಿಂದ ಈ ಕೃತ್ಯ ಎಸಗಿರಬಹುದೆಂದು ಶಂಕಿಸಲಾಗಿದೆ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...