alex Certify
ಕನ್ನಡ ದುನಿಯಾ       Mobile App
       

Kannada Duniya

ಫೇಸ್ ಬುಕ್ ಮಾಯಾಂಗನೆಯಿಂದ ಮೋಸ ಹೋದ ಟೆಕ್ಕಿ

ಗದಗ: ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಯುವಕನನ್ನು ಪರಿಚಯಿಸಿಕೊಂಡು, 13 ಲಕ್ಷ ರೂ. ಪಡೆದು ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದೆ.

ಬೆಂಗಳೂರಿನಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿರುವ ಗದಗ ಜಿಲ್ಲೆ ರೋಣ ತಾಲ್ಲೂಕಿನ ಹುಲ್ಲೂರ ಗ್ರಾಮದ ಯುವಕ ವಂಚನೆಗೊಳಗಾದವರು. ಬೆಂಗಳೂರಿನಲ್ಲಿ ವಾಸವಾಗಿರುವ ರಾಯಚೂರು ಮೂಲದ ಯುವತಿ ಫೇಸ್ ಬುಕ್ ನಲ್ಲಿ ಪರಿಚಯಿಸಿಕೊಂಡಿದ್ದಾಳೆ.

ನಂತರದಲ್ಲಿ ಯುವತಿ ಬೇರೆ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದು, ಯುವಕನನ್ನು ಪ್ರೀತಿಸುವ ನಾಟಕವಾಡಿದ್ದಾಳೆ. ಮದುವೆಯಾಗುವುದಾಗಿ ನಂಬಿಸಿದ್ದ ಆಕೆ, ತನ್ನ ತಾಯಿಗೆ ಹುಷಾರಿಲ್ಲ ಎಂದು ಹೇಳಿ 13 ಲಕ್ಷ ರೂ. ಪಡೆದುಕೊಂಡಿದ್ದಾಳೆ.

2016 ರ ಡಿಸೆಂಬರ್ ನಿಂದ 2017 ರ ಆಗಸ್ಟ್ ವರೆಗೆ ಟೆಕ್ಕಿಯಿಂದ ಹಣ ಪಡೆದುಕೊಂಡ ಯುವತಿ ಕೈಕೊಟ್ಟಿದ್ದಾಳೆ. ಇದರಿಂದ ಕಂಗಾಲಾದ ಯುವಕ ರೋಣ ಠಾಣೆ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...