alex Certify
ಕನ್ನಡ ದುನಿಯಾ       Mobile App
       

Kannada Duniya

ಲಾಕಪ್ ಡೆತ್: ಪೊಲೀಸ್ ಠಾಣೆ ಧ್ವಂಸ

gadag

ಗದಗ: ಪೊಲೀಸ್ ವಶದಲ್ಲಿದ್ದ ಯುವಕನೊಬ್ಬ ಸಾವನ್ನಪ್ಪಿದ್ದರಿಂದ, ಆಕ್ರೋಶಗೊಂಡ ಸಾರ್ವಜನಿಕರು, ಠಾಣೆಯನ್ನು ಧ್ವಂಸ ಮಾಡಿದ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರದಲ್ಲಿ ನಡೆದಿದೆ.

ಶಿರಹಟ್ಟಿ ತಾಲ್ಲೂಕು ಬಟ್ಟೂರು ಗ್ರಾಮದ ಶಿವಪ್ಪ ಗೂಳಿ(21) ಎಂಬ ಯುವಕನನ್ನು, ಅಕ್ರಮ ಮರಳು ಸಾಗಾಣೆ ಪ್ರಕರಣದಲ್ಲಿ ಲಕ್ಷ್ಮೇಶ್ವರ ಠಾಣೆ ಪೊಲೀಸರು ಕರೆತಂದಿದ್ದಾರೆ.

ವಿಚಾರಣೆ ಸಂದರ್ಭದಲ್ಲಿ ಪೊಲೀಸರಿಂದ ಥಳಿತಕ್ಕೆ ಒಳಗಾದ ಶಿವಪ್ಪ ಮೃತಪಟ್ಟಿದ್ದಾನೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಆಕ್ರೋಶಗೊಂಡ ಗ್ರಾಮಸ್ಥರು, ಪೊಲೀಸ್ ಠಾಣೆಗೆ ನುಗ್ಗಿ ಪೀಠೋಪಕರಣ, ಕಿಟಕಿ ಗಾಜುಗಳನ್ನು ಧ್ವಂಸ ಮಾಡಿದ್ದಾರೆ. ಪೊಲೀಸ್ ವಾಹನಕ್ಕೆ ಬೆಂಕಿ ಹಚ್ಚಿದ್ದಾರೆ.

ಜನರ ಆಕ್ರೋಶ ಹೆಚ್ಚಾಗುತ್ತಿದ್ದಂತೆ ಪೊಲೀಸರೆಲ್ಲಾ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಹೇಳಲಾಗಿದೆ. ಲಕ್ಷ್ಮೇಶ್ವರದಲ್ಲಿ ಉದ್ವಿಗ್ನ ಸ್ಥಿತಿ ಉಂಟಾಗಿದ್ದು, ಸ್ಥಳಕ್ಕೆ ಹೆಚ್ಚಿನ ಪೊಲೀಸರನ್ನು ಕರೆಸಲಾಗಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...