alex Certify
ಕನ್ನಡ ದುನಿಯಾ       Mobile App
       

Kannada Duniya

ಕಪ್ಪತಗುಡ್ಡಕ್ಕಾಗಿ ಹೋರಾಟ: ಇಬ್ಬರು ಅಸ್ವಸ್ಥ

kappat

ಗದಗ: ಕಪ್ಪತಗುಡ್ಡ ಸಂರಕ್ಷಣೆಗೆ ಒತ್ತಾಯಿಸಿ, ತೋಂಟದಾರ್ಯ ಶ್ರೀಗಳ ನೇತೃತ್ವದಲ್ಲಿ ನಡೆಯುತ್ತಿರುವ ಅಹೋರಾತ್ರಿ ಉಪವಾಸ ಸತ್ಯಾಗ್ರಹ 3 ನೇ ದಿನಕ್ಕೆ ಕಾಲಿಟ್ಟಿದೆ.

ಹೋರಾಟದಲ್ಲಿ ಪಾಲ್ಗೊಂಡಿದ್ದ ಪ್ರಭುಗೌಡ ಪಾಟೀಲ್, ಪ್ರತಿಮಾ ಅವರು ಅಸ್ವಸ್ಥರಾಗಿದ್ದಾರೆ. ದೇಹದಲ್ಲಿ ಸಕ್ಕರೆ ಅಂಶ ಕಡಿಮೆಯಾಗಿ ಅಸ್ವಸ್ಥರಾದ ಪ್ರಭುಗೌಡ ಪಾಟೀಲರನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

ಗದಗದ ಗಾಂಧಿ ವೃತ್ತದಲ್ಲಿ ನಡೆಯುತ್ತಿರುವ ಸತ್ಯಾಗ್ರಹದಲ್ಲಿ ಸಾಮಾಜಿಕ ಹೋರಾಟಗಾರ ಎಸ್.ಆರ್. ಹಿರೇಮಠ್, ನಾರಾಯಣ ಸ್ವಾಮಿ ಮೊದಲಾದ ಪ್ರಮುಖರು ಪಾಲ್ಗೊಂಡಿದ್ದಾರೆ.

ಮಹಿಳೆಯರು, ವಿದ್ಯಾರ್ಥಿಗಳು ಕೂಡ ಹೋರಾಟಕ್ಕೆ ಸಾಥ್ ನೀಡಿದ್ದಾರೆ. ಕಪ್ಪತಗುಡ್ಡವನ್ನು ಸಂರಕ್ಷಿತ ಮೀಸಲು ಅರಣ್ಯ ಪ್ರದೇಶವಾಗಿ ಮರು ಘೋಷಿಸಬೇಕೆಂದು ಸ್ವಾಮೀಜಿ ಒತ್ತಾಯಿಸಿದ್ದಾರೆ. ಹೋರಾಟದ ಸ್ಥಳದಲ್ಲಿ ವೈದ್ಯರು, ಪೊಲೀಸರು ಬೀಡು ಬಿಟ್ಟಿದ್ದಾರೆ. ವೈದ್ಯರು ಹೋರಾಟಗಾರರ ಆರೋಗ್ಯ ತಪಾಸಣೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...