alex Certify
ಕನ್ನಡ ದುನಿಯಾ       Mobile App
       

Kannada Duniya

‘ಗಜ’ ಎಫೆಕ್ಟ್: ಈ ಜಿಲ್ಲೆಗಳಲ್ಲಿ ಆಗಲಿದೆ ಮಳೆ

‘ಗಜ’ ಚಂಡಮಾರುತದಿಂದಾಗಿ ಬಂಗಾಳಕೊಲ್ಲಿಯಲ್ಲಿ ವಾಯು ಭಾರ ಕುಸಿತ ಉಂಟಾಗಿದ್ದು, ಇದರ ಪರಿಣಾಮ ರಾಜ್ಯದ ಮೇಲೂ ಬೀರಿದೆ. ಇದರಿಂದಾಗಿ ರಾಜ್ಯದ ಹಲವು ಭಾಗಗಳಲ್ಲಿ ಇನ್ನೂ ಎರಡು ದಿನ ಮಳೆಯಾಗಲಿದೆ.

ಗಜ ಚಂಡಮಾರುತ ಈಗ ಅರಬ್ಬಿ ಸಮುದ್ರದ ಆಗ್ನೇಯ ಭಾಗಕ್ಕೆ ಹೋಗಿದ್ದು, ಇದರಿಂದ ರಾಜ್ಯದ ಉತ್ತರ ಒಳನಾಡು ಸೇರಿದಂತೆ ಪಶ್ಚಿಮ ಭಾಗದಲ್ಲಿ ಗಾಳಿ, ಮಳೆಯಾಗಲಿದೆ.

ಬೆಂಗಳೂರು ಗ್ರಾಮಾಂತರ, ಕೋಲಾರ, ಶಿವಮೊಗ್ಗ, ಚಿಕ್ಕಬಳ್ಳಾಪುರ, ತುಮಕೂರು, ದಾವಣಗೆರೆ, ಚಿತ್ರದುರ್ಗ, ಮಂಡ್ಯ, ರಾಮನಗರ, ಚಾಮರಾಜನಗರ, ಹಾಸನ, ಚಿಕ್ಕಮಗಳೂರು, ರಾಯಚೂರು, ಯಾದಗಿರಿ, ಬೆಳಗಾವಿ, ಬಾಗಲಕೋಟ, ವಿಜಯಪುರ, ಧಾರವಾಡ, ಹಾವೇರಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಜನತೆ ಎಚ್ಚರಿಕೆ ವಹಿಸಲು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಸೂಚನೆ ನೀಡಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...