alex Certify
ಕನ್ನಡ ದುನಿಯಾ       Mobile App
       

Kannada Duniya

‘ಬಿ’ ರಿಪೋರ್ಟ್ ನಲ್ಲಿ ಗಣಪತಿ ಆತ್ಮಹತ್ಯೆ ರಹಸ್ಯ ಬಯಲು

m k ganapati 8

ಮಡಿಕೇರಿ: ರಾಜ್ಯದಲ್ಲಿ ಸಂಚಲನ ಮೂಡಿಸಿದ್ದ ಡಿ.ವೈ.ಎಸ್.ಪಿ. ಎಂ.ಕೆ. ಗಣಪತಿ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿ.ಐ.ಡಿ. ‘ಬಿ’ ರಿಪೋರ್ಟ್ ಸಲ್ಲಿಸಿದೆ.

ಜೆ.ಎಂ.ಎಫ್.ಸಿ. ನ್ಯಾಯಾಲಯಕ್ಕೆ ಸಲ್ಲಿಸಿರುವ ವರದಿಯಲ್ಲಿ ಗಣಪತಿ ಅವರ ಆತ್ಮಹತ್ಯೆಗೆ ಮಾನಸಿಕ ಖಿನ್ನತೆಯೇ ಕಾರಣ ಎಂದು ಪರೋಕ್ಷವಾಗಿ ಹೇಳಲಾಗಿದೆ. ಗಣಪತಿ ಅವರ ಪತ್ನಿ, ಮಕ್ಕಳು, ಪೋಷಕರು ಸೇರಿದಂತೆ ಹಲವರಿಂದ ಮಾಹಿತಿ ಪಡೆದುಕೊಳ್ಳಲಾಗಿದೆ. ಅವರು ಚಿಕಿತ್ಸೆ ಪಡೆದುಕೊಂಡಿದ್ದ ವೈದ್ಯರಿಂದಲೂ ಸಿ.ಐ.ಡಿ. ಮಾಹಿತಿ ಪಡೆದುಕೊಂಡಿದೆ.

ಗಣಪತಿ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದರು. ಚಿಕ್ಕಮಗಳೂರು ಡಿ.ವೈ.ಎಸ್.ಪಿ. ಕಲ್ಲಪ್ಪ ಹಂಡಿಭಾಗ್ ಆತ್ಮಹತ್ಯೆ ಮಾಡಿಕೊಂಡ ನಂತರ ಗಣಪತಿ ಅವರು ಖಿನ್ನತೆಗೆ ಒಳಗಾಗಿದ್ದರು ಎಂದು ಸಿ.ಐ.ಡಿ. ವರದಿ ನೀಡಿರುವುದಾಗಿ ಮೂಲಗಳು ತಿಳಿಸಿವೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...