alex Certify
ಕನ್ನಡ ದುನಿಯಾ       Mobile App
       

Kannada Duniya

ಗಣಪತಿ ಮೆರವಣಿಗೆ ಮೇಲೆ ಕಲ್ಲು ತೂರಾಟ

Ganesh-Ganapathi

ಶಿವಮೊಗ್ಗ: ಶಾಂತಿಯುತವಾಗಿ ಸಾಗುತ್ತಿದ್ದ ಗಣಪತಿ ಮೆರವಣಿಗೆ ಮೇಲೆ, ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ ಘಟನೆ ಶಿವಮೊಗ್ಗದ ಹರಕೆರೆಯಲ್ಲಿ ನಡೆದಿದೆ.

ಘಟನೆಯಲ್ಲಿ ಮೂವರು ಮಹಿಳೆಯರು ಸೇರಿದಂತೆ 5 ಮಂದಿ ಗಾಯಗೊಂಡಿದ್ದು, ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ಸೇರಿಸಲಾಗಿದೆ. ಹರಕೆರೆಯ ನಂದಿ ಬಸವೇಶ್ವರ ಯುವಕರ ಸಂಘದ ವತಿಯಿಂದ ಚೌಡೇಶ್ವರಿ ದೇವಾಲಯದಲ್ಲಿ ಗಣಪತಿ ಪ್ರತಿಷ್ಠಾಪನೆ ಮಾಡಲಾಗಿದ್ದು, ಈ ಗಣಪತಿ ವಿಸರ್ಜನೆ ಮೆರವಣಿಗೆ ನಡೆಯುವಾಗ, ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಮಚ್ಚುಗಳನ್ನು ಬೀಸಿದ್ದಾರೆ ಎಂದು ಹೇಳಲಾಗಿದೆ.

ಬಡಾವಣೆಯ ಮಹಿಳೆಯರು ತಡರಾತ್ರಿಯಲ್ಲೇ ಪ್ರತಿಭಟನೆ ನಡೆಸಿ, ಕಿಡಿಗೇಡಿಗಳ ಬಂಧನಕ್ಕೆ ಆಗ್ರಹಿಸಿದ್ದಾರೆ. ಈ ಸಂದರ್ಭದಲ್ಲಿ ಮತ್ತೆ ಕಲ್ಲು ತೂರಿ ಬಂದಿದ್ದು, ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು, ಮೂವರು ಕಿಡಿಗೇಡಿಗಳನ್ನು ಬಂಧಿಸಿದ್ದಾರೆ. ಸ್ಥಳಕ್ಕೆ ಎಸ್.ಪಿ. ಅಭಿನವ್ ಖರೆ, ಎ.ಎಸ್.ಪಿ. ವಿನ್ಸೆಂಟ್ ಶಾಂತ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪರಿಸ್ಥಿತಿ ನಿಯಂತ್ರಣದಲ್ಲಿದೆ. ತುಂಗಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...