alex Certify
ಕನ್ನಡ ದುನಿಯಾ       Mobile App
       

Kannada Duniya

ಪೊಲೀಸರಿಂದಲೇ ಗಣೇಶ ಮೂರ್ತಿಗಳ ವಿಸರ್ಜನೆ

ಕೊಪ್ಪಳ: ಮೆರವಣಿಗೆ ಅರ್ಧಕ್ಕೆ ನಿಲ್ಲಿಸಿ ಯುವಕರು ತೆರಳಿದ್ದರಿಂದ ಪೊಲೀಸರೇ ಗಣಪತಿ ಮೂರ್ತಿಗಳನ್ನು ವಿಸರ್ಜಿಸಿದ ಘಟನೆ ಕೊಪ್ಪಳದಲ್ಲಿ ನಡೆದಿದೆ ಎನ್ನಲಾಗಿದೆ.

ಕೊಪ್ಪಳದ ಜೆ.ಹೆಚ್. ಪಟೇಲ್ ಬಡಾವಣೆ ಸೇರಿದಂತೆ ಅಕ್ಕಪಕ್ಕದ 4 ಕಡೆ ಪ್ರತಿಷ್ಠಾಪಿಸಿದ್ದ ಗಣಪತಿ ಮೂರ್ತಿಗಳ ವಿಸರ್ಜನಾ ಪೂರ್ವ ಮೆರವಣಿಗೆ ನಿನ್ನೆ ರಾತ್ರಿ ನಡೆದಿದೆ.

ಪೊಲೀಸರು ಡಿ.ಜೆ. ಬಳಸದಂತೆ ಮೊದಲೇ ಸೂಚನೆ ನೀಡಿದ್ದರೂ, ಮೆರವಣಿಗೆಯಲ್ಲಿ ಯುವಕರು ಡಿ.ಜೆ. ಬಳಸಿದ್ದರೆನ್ನಲಾಗಿದೆ.

ಅಶೋಕ ವೃತ್ತದ ಬಳಿ ಮೆರವಣಿಗೆ ಸಾಗುವಾಗ ಡಿ.ಜೆ. ಬಂದ್ ಮಾಡುವಂತೆ ಪೊಲೀಸರು ಸೂಚಿಸಿದ್ದಾರೆ. ಆದರೆ, ಇದನ್ನು ಒಪ್ಪದ ಯುವಕರು ಕಡಿಮೆ ಸೌಂಡ್ ನ ಡಿ.ಜೆ. ಇದೆ ಎಂದು ಪ್ರತಿಭಟನೆ ನಡೆಸಿದ್ದಾರೆ.

ಗಣಪತಿ ಮೆರವಣಿಗೆ ನಿಲ್ಲಿಸಿ ಪ್ರತಿಭಟನೆ ನಡೆಸಿದ್ದು, ಈ ವೇಳೆ ಕೆಲವರು ಕಲ್ಲು ತೂರಾಟ ನಡೆಸಿದ್ದಾರೆ. ಪೊಲೀಸರು ಕಿಡಿಗೇಡಿಗಳನ್ನು ಅಲ್ಲಿಂದ ಚದುರಿಸಿದ್ದಾರೆ.

ಗಣಪತಿ ವಿಸರ್ಜನೆಗೆ ಬಂದಿದ್ದ ಯುವಕರು ಅರ್ಧಕ್ಕೆ ಅಲ್ಲಿಂದ ವಾಪಸ್ ಆಗಿದ್ದಾರೆ. ಕೊನೆಗೆ ಪೊಲೀಸರೇ ಗಣಪತಿ ಮೂರ್ತಿಗಳನ್ನು ವಿಸರ್ಜನೆ ಮಾಡಿದ್ದಾರೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...