alex Certify
ಕನ್ನಡ ದುನಿಯಾ       Mobile App
       

Kannada Duniya

ಗಣೇಶ ಮೂರ್ತಿ ಮೆರವಣಿಗೆಯಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ: ಹಲ್ಲೆಗೊಳಗಾದ ಯುವಕ ಆಸ್ಪತ್ರೆಗೆ ದಾಖಲು

ಹುಬ್ಬಳ್ಳಿ: ಗಣೇಶ ಮೂರ್ತಿ ವಿಸರ್ಜನೆಗೆ ಮೆರವಣಿಗೆ ಹೊರಟ ಸಂದರ್ಭದಲ್ಲಿ ಎರಡು ಗುಂಪುಗಳ ನಡುವೆ ನಡೆದ ಘರ್ಷಣೆಯಲ್ಲಿ ಯುವಕನೊಬ್ಬನ ಮೇಲೆ ಗಂಭೀರವಾಗಿ ಹಲ್ಲೆ ನಡೆಸಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಇಲ್ಲಿನ ವಿದ್ಯಾನಗರದ ನೇಕಾರ ಕಾಲೋನಿಯಲ್ಲಿ ಈ ಘಟನೆ ನಡೆದಿದ್ದು, ಅಣ್ಣಪ್ಪ ಜಾಡರ್ (25) ಹಲ್ಲೆಗೊಳಗಾದ ಯುವಕ. ಗಣೇಶ ಮೂರ್ತಿ ಮೆರವಣಿಗೆ ಸಂದರ್ಭದಲ್ಲಿ ಹಳೆ ವೈಷ್ಯಮ್ಯದ ಹಿನ್ನಲೆಯಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ ಆರಂಭವಾಗಿ, ಕಲ್ಲು ತೂರಾಟ ನಡೆದಿದೆ.

ಈ ವೇಳೆ ಅಣ್ಣಪ್ಪ ಎಂಬ ಯುವಕನ ಮೇಲೆ ಹಲ್ಲೆ ನಡೆಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಯುವಕನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...