alex Certify
ಕನ್ನಡ ದುನಿಯಾ       Mobile App
       

Kannada Duniya

20 ಗ್ಯಾಸ್ ಸಿಲಿಂಡರ್ ಸ್ಪೋಟ, ತಪ್ಪಿತು ಭಾರೀ ಅನಾಹುತ

GAS_BLAST19

ಬೆಂಗಳೂರು: ಆಕಸ್ಮಿಕವಾಗಿ ಬೆಂಕಿ ತಗುಲಿ, ಸುಮಾರು 20 ಕ್ಕೂ ಹೆಚ್ಚು ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಅದೃಷ್ಟವಶಾತ್ ನಡೆಯಬಹುದಾಗಿದ್ದ ಭಾರೀ ದುರಂತವೊಂದು ತಪ್ಪಿದಂತಾಗಿದೆ.

ಬೆಂಗಳೂರಿನ ಬನಶಂಕರಿ ಮೂರನೇ ಹಂತದ ಕತ್ರಿಗುಪ್ಪೆಯಲ್ಲಿ ಖಾಸಗಿ ಕಂಪನಿಗೆ ಸೇರಿದ ಗೋದಾಮಿನಲ್ಲಿ ಗ್ಯಾಸ್ ಸಿಲಿಂಡರ್ ಗಳನ್ನು ಸಂಗ್ರಹಿಸಿ ಇಡಲಾಗಿತ್ತು. ಬೆಳಗಿನ ಜಾವ 5.30 ರ ಸುಮಾರಿಗೆ ಒಮ್ಮೆಲೆ ಭಾರೀ ಸ್ಪೋಟ ಉಂಟಾಗಿದೆ. ನಂತರ ಸರಣಿ ಸ್ಪೋಟ ಸಂಭವಿಸಿ, ಸುಮಾರು 20 ಕ್ಕೂ ಹೆಚ್ಚು ಸಿಲಿಂಡರ್ ಸ್ಪೋಟಗೊಂಡಿದ್ದು, ಭಾರೀ ಶಬ್ಧ ಉಂಟಾಗಿದೆ. ಘಟನೆಯಲ್ಲಿ ಗೋಡೌನ್ ಸಂಪೂರ್ಣ ಭಸ್ಮವಾಗಿದೆ. ಅಲ್ಲದೇ, ಪಕ್ಕದಲ್ಲಿದ್ದ ಕಾರು, ಬೈಕ್ ಕೂಡ ಸುಟ್ಟುಹೋಗಿವೆ.

ಗೋಡೌನ್ ಪಕ್ಕದಲ್ಲಿದ್ದ ಮನೆ, ಕಚೇರಿ, ಅಂಗಡಿಗಳ ಕಿಟಕಿ ಗಾಜುಗಳು ಹಾಳಾಗಿವೆ. ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ 3 ಅಗ್ನಿಶಾಮಕ ವಾಹನಗಳ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು. ಬಸವನಗುಡಿ ಶಾಸಕ ರವಿಸುಬ್ರಹ್ಮಣ್ಯ ಸ್ಥಳಕ್ಕೆ ಭೇಟಿ ನೀಡಿದ್ದರು. ಬಸವನಗುಡಿ ಪೊಲೀಸರು ಪರಿಶೀಲನೆ ನಡೆಸಿದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...