alex Certify
ಕನ್ನಡ ದುನಿಯಾ       Mobile App
       

Kannada Duniya

ಗೌರಿ ಲಂಕೇಶ್ ಹತ್ಯೆ CBI ತನಿಖೆಗೆ ಆಗ್ರಹ

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆ ಪ್ರಕರಣದ ತನಿಖೆಯನ್ನು ಸಿ.ಬಿ.ಐ.ಗೆ ವಹಿಸಬೇಕೆಂದು ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಒತ್ತಾಯಿಸಿದ್ದಾರೆ.

ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಸಾಮಾನ್ಯ ಪ್ರಜೆಗೆ ರಕ್ಷಣೆ ಇಲ್ಲದಂತಾಗಿದೆ. ಎಡಪಂಥೀಯ, ಬಲಪಂಥೀಯ ವಿಚಾರಧಾರೆ ಹೊಂದಿದವರನ್ನು ಹತ್ಯೆ ಮಾಡಲಾಗುತ್ತಿದೆ. ಕಾನೂನು, ಸುವ್ಯವಸ್ಥೆ ಹದಗೆಟ್ಟಿದ್ದು, ಕರ್ನಾಟಕ ಬಿಹಾರದಂತಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಘಟನೆಯನ್ನು ಖಂಡಿಸಿದ್ದಾರೆ. ಗೌರಿ ಲಂಕೇಶ್ ಅವರ ಹತ್ಯೆಯ ಸುದ್ದಿ ಆಘಾತ ತಂದಿದೆ. ಆಗಂತುಕರು ಅವರನ್ನು ಕೊಂದಿರುವುದು ನಾಗರಿಕ ಸಮಾಜ ತಲೆ ತಗ್ಗಿಸುವ, ಎಂದಿಗೂ ಒಪ್ಪಲಾಗದ ನೀಚ ಕೃತ್ಯವಾಗಿದೆ. ಕೂಡಲೇ ಹಂತಕರನ್ನು ಬಂಧಿಸುವ ನಿಟ್ಟಿನಲ್ಲಿ ಎಲ್ಲಾ ಪ್ರಯತ್ನ ನಡೆಸಬೇಕೆಂದು ಹೇಳಿದ್ದಾರೆ.

ಸಂಸದೆ ಶೋಭಾ ಕರಂದ್ಲಾಜೆ ಅವರು, ಕಲಬುರಗಿ ಹತ್ಯೆ ನಡೆದು 2 ವರ್ಷಗಳಾಗಿದ್ದು, ತನಿಖೆ ನಡೆಯುತ್ತಿದೆ. ಗೌರಿ ಲಂಕೇಶ್ ಅವರನ್ನು ಹತ್ಯೆ ಮಾಡಿರುವುದು ಖಂಡನೀಯವಾಗಿದೆ. ಹೋರಾಟಗಾರ್ತಿ ಸಾವಿನಿಂದ ನೋವಾಗಿದೆ. ನಮ್ಮ ಮತ್ತು ಅವರ ವಿಚಾರ ಬೇರೆಯಾಗಿದ್ದವು. ಎಲ್ಲಾ ರೀತಿಯ ಅಭಿಪ್ರಾಯ ವ್ಯಕ್ತಪಡಿಸಲು ಅವಕಾಶವಿದೆ. ವಿಚಾರಗಳ ಸಂಘರ್ಷ ನಡೆಯಲಿ. ಹತ್ಯೆ ಮಾಡುವ ಇಂತಹ ಕೃತ್ಯವನ್ನು ಒಪ್ಪಲು ಸಾಧ್ಯವಿಲ್ಲ. ಕೂಡಲೇ ಹಂತಕರನ್ನು ಬಂಧಿಸಬೇಕೆಂದು ಒತ್ತಾಯಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...