alex Certify
ಕನ್ನಡ ದುನಿಯಾ       Mobile App
       

Kannada Duniya

ಗೌರಿ ಲಂಕೇಶ್ ಹತ್ಯೆ ಆರೋಪಿ ಪರಶುರಾಮ್ ಯಾರು? ಆತನ ಹಿನ್ನೆಲೆ ಏನು?

ಬೆಂಗಳೂರಿನ ರಾಜರಾಜೇಶ್ವರಿ ನಗರದ ತಮ್ಮ ನಿವಾಸದಲ್ಲೇ ದುಷ್ಕರ್ಮಿಗಳಿಂದ ಹತ್ಯೆಗೀಡಾಗಿದ್ದ ಖ್ಯಾತ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ತಿರುವು ಸಿಕ್ಕಿದೆ. ಗೌರಿ ಲಂಕೇಶ್ ರ ಮೇಲೆ ಗುಂಡಿನ ದಾಳಿ ನಡೆಸಿದ್ದನೆಂದು ಹೇಳಲಾಗುತ್ತಿರುವ ಪ್ರಮುಖ ಆರೋಪಿ ಈಗ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳದ ಬಲೆಗೆ ಬಿದ್ದಿದ್ದಾನೆ.

ಹಿಂದೂ ಧರ್ಮದ ಕುರಿತು ಅಪಾರ ಅಭಿಮಾನ ಹೊಂದಿದ್ದ ವಿಜಯಪುರ ಜಿಲ್ಲೆ ಸಿಂದಗಿಯ ಪರಶುರಾಮ್ ವಾಗ್ಮೋರೆ ಬಂಧಿತ ಆರೋಪಿಯಾಗಿದ್ದು, ಹಿಂದೂ ಧರ್ಮದ ಕುರಿತು ಅಭಿಮಾನ ಹೊಂದಿದ್ದ ಈತ, ತನ್ನ ಧರ್ಮದ ಅವಹೇಳನ ಮಾಡುವವರ ವಿರುದ್ಧ ಕಿಡಿ ಕಾರುತ್ತಿದ್ದನೆನ್ನಲಾಗಿದೆ. ಈ ಹಿಂದೆ ಸಿಂದಗಿ ತಹಶೀಲ್ದಾರ್ ಕಚೇರಿ ಮೇಲೆ ಪಾಕಿಸ್ತಾನದ ಧ್ವಜ ಹಾರಿಸಿದ ಪ್ರಕರಣದಲ್ಲೂ ಪರಶುರಾಮ ಆರೋಪಿಯಾಗಿದ್ದ.

ಗೌರಿ ಲಂಕೇಶ್, ತಮ್ಮ ಪತ್ರಿಕೆಯಲ್ಲಿ ಹಾಗೂ ಸಾರ್ವಜನಿಕ ಸಭೆಗಳಲ್ಲಿ ಹಿಂದೂ ಧರ್ಮದ ಕುರಿತು ಅವಹೇಳನಾಕಾರಿಯಾಗಿ ನಡೆದುಕೊಳ್ಳುತ್ತಿದ್ದಾರೆಂದು ಆಕ್ರೋಶಗೊಂಡಿದ್ದ ಪರಶುರಾಮ್ ಹತ್ಯೆ ಸಂಚು ರೂಪಿಸಿದ್ದು, 2017 ರ ಸೆಪ್ಟಂಬರ್ 5 ರಂದು ಹತ್ಯೆ ಮಾಡಿದ್ದಾನೆಂದು ಆರೋಪಿಸಲಾಗಿದೆ. ರಾಷ್ಟ್ರ ಮಟ್ಟದಲ್ಲೂ ದೊಡ್ಡ ಸುದ್ದಿಯಾಗಿದ್ದ ಈ ಪ್ರಕರಣದ ಪ್ರಮುಖ ಆರೋಪಿ 9 ತಿಂಗಳ ಬಳಿಕ ಪೊಲೀಸರ ಬಲೆಗೆ ಬಿದ್ದಿದ್ದು, ಆತನನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿರುವ ವಿಶೇಷ ತನಿಖಾ ದಳದ ಪೊಲೀಸರು ಹೆಚ್ಚಿನ ವಿಚಾರಣೆಗಾಗಿ ತಮ್ಮ ಕಸ್ಟಡಿಗೆ ಪಡೆದಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...