alex Certify
ಕನ್ನಡ ದುನಿಯಾ       Mobile App
       

Kannada Duniya

ಎಸ್ ಐಟಿ ತನಿಖೆಗೆ ಗೌರಿ ಲಂಕೇಶ್ ಹತ್ಯೆ ಪ್ರಕರಣ

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ಎಸ್ ಐಟಿಗೆ ವಹಿಸಿದೆ. ಐಜಿ ನೇತೃತ್ವದಲ್ಲಿ ಎಸ್ ಐಟಿ ತನಿಖೆ ನಡೆಸಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಸಿದ್ದರಾಮಯ್ಯ ಈ ವಿಷ್ಯ ತಿಳಿಸಿದ್ದಾರೆ.

ಗೌರಿ ಲಂಕೇಶ್ ಹತ್ಯೆ ಶಾಕಿಂಗ್ ನ್ಯೂಸ್. ಗೌರಿ ನನಗೂ ಆಪ್ತರಾಗಿದ್ದರು. ಇದು ವಿಷಾಧನಿಯ ಎಂದ ಸಿದ್ದರಾಮಯ್ಯ ಗೌರಿ ಒಂದು ವಾರದ ಹಿಂದಷ್ಟೇ ನಮ್ಮನ್ನು ಭೇಟಿಯಾಗಿದ್ದರು. ಆದ್ರೆ ಬೆದರಿಕೆಯಿದೆ ಎನ್ನುವ ಬಗ್ಗೆ ಯಾವುದೇ ಮಾಹಿತಿ ನೀಡಿರಲಿಲ್ಲ ಎಂದಿದ್ದಾರೆ.

ಸಿಐಡಿ ಮತ್ತು ಸಿಬಿಐ ತನಿಖೆ ಬೇಡವೆಂದು ನಿರ್ಧರಿಸಲಾಗಿದೆ. ಸಿಬಿಐ ತನಿಖೆಗೆ ಯಾರೂ ಹೇಳಿಲ್ಲ. ಎಸ್ ಐಟಿ ಟೀಂ ಶೀಘ್ರ ತನಿಖೆ ನಡೆಸಿ ಅಪರಾಧಿಗಳನ್ನು ಸೆರೆ ಹಿಡಿಯಲಿದೆ. ತಂಡ ರಚಿಸಲು ಡಿಜಿಪಿಗೆ ಸೂಚನೆ ನೀಡಲಾಗಿದೆ ಎಂದು ಸಿದ್ಧರಾಮಯ್ಯ ಹೇಳಿದ್ದಾರೆ.

ಅಧಿಕಾರಿಗಳ ಸಭೆ ಬಳಿಕ ಮಾತನಾಡಿದ ಅವರು, ಪ್ರಗತಿಪರರಿಗೆ ಪೊಲೀಸ್ ಭದ್ರತೆ ನೀಡಲು ಸೂಚನೆ ನೀಡಲಾಗಿದೆ ಎಂದ್ರು. ಈಗಾಗಲೇ ಮೂರು ಪೊಲೀಸ್ ಟೀಂ ಕಾರ್ಯಪ್ರವೃತ್ತವಾಗಿದೆ ಎಂದ್ರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...