alex Certify
ಕನ್ನಡ ದುನಿಯಾ       Mobile App
       

Kannada Duniya

ಗೌರಿ ಲಂಕೇಶ್ ಆಪ್ತನಿಗೆ ಜೀವ ಬೆದರಿಕೆ

ಬೆಂಗಳೂರು: ದುಷ್ಕರ್ಮಿಗಳ ಗುಂಡಿನ ದಾಳಿಗೆ ಬಲಿಯಾದ ಖ್ಯಾತ ಪತ್ರಕರ್ತೆ ಗೌರಿ ಲಂಕೇಶ್ ಅವರ ಆಪ್ತರೊಬ್ಬರಿಗೆ ಜೀವ ಬೆದರಿಕೆ ಹಾಕಲಾಗಿದೆ.

ಗೌರಿ ಲಂಕೇಶ್ ಅವರ ಆಪ್ತ, ದಲಿತ ಪರ ಹೋರಾಟಗಾರ ಭಾಸ್ಕರ್ ಪ್ರಸಾದ್ ಅವರಿಗೆ ಕರೆ ಮಾಡಿದ ಅಪರಿಚಿತ ವ್ಯಕ್ತಿ 3 ದಿನದಲ್ಲಿ ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ.

ನಿನ್ನೆ ತಡರಾತ್ರಿ ಇಂಟರ್ ನೆಟ್ ಕಾಲ್ ಮಾಡಿದ ವ್ಯಕ್ತಿ ಅವಾಚ್ಯ ಪದಗಳಿಂದ ನಿಂದಿಸಿ, ಜೀವ ಬೆದರಿಕೆ ಹಾಕಿದ್ದಾನೆ. ಭಾಸ್ಕರ್ ಪ್ರಸಾದ್ ಅವರು ಗೌರಿ ಲಂಕೇಶರೊಂದಿಗೆ ಅನೇಕ ಹೋರಾಟಗಳಲ್ಲಿ ಪಾಲ್ಗೊಂಡಿದ್ದರು. ಉಡುಪಿ ಚಲೋ ಹೋರಾಟದಲ್ಲಿ ನೇತೃತ್ವ ವಹಿಸಿದ್ದರು.

3 ದಿನದಲ್ಲಿ ಹತ್ಯೆ ಮಾಡುವುದಾಗಿ ತಮಗೆ ಬೆದರಿಕೆ ಕರೆ ಬಂದ ಹಿನ್ನಲೆಯಲ್ಲಿ ಭಾಸ್ಕರ್ ಪ್ರಸಾದ್ ಡಿ.ಜಿ. ಕಚೇರಿಗೆ ತೆರಳಿ ದೂರು ಸಲ್ಲಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...