alex Certify
ಕನ್ನಡ ದುನಿಯಾ       Mobile App
       

Kannada Duniya

ಕೇಂದ್ರ ಸಚಿವ ಅನಂತಕುಮಾರ್ ಹೆಗಡೆಗೆ ಪುಟಗೋಸಿ ಗಿಫ್ಟ್

ಜೆಡಿಎಸ್ ಪಕ್ಷವನ್ನು ಪುಟಗೋಸಿಗೆ ಹೋಲಿಸಿದ್ದ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆಗೆ ಮಂಡ್ಯ ಜೆಡಿಎಸ್ ಕಾರ್ಯಕರ್ತರು  ಮೂಲಕ ಪುಟಗೋಸಿ ಗಿಫ್ಟ್ ರವಾನಿಸಿದ್ದಾರೆ.

ಜೆಡಿಎಸ್ ಪಕ್ಷದ ವಿರುದ್ಧ ಮಾತನಾಡುವಾಗ ನಾಲಿಗೆ ಮೇಲೆ ಲಗಾಮು ಇರಲಿ ಎಂದಿರುವ ಮಂಡ್ಯ ಜೆಡಿಎಸ್ ಕಾರ್ಯಕರ್ತರು, ನಮ್ಮ ಪಕ್ಷ ಪುಟಗೋಸಿ ಅಲ್ಲ, ನೀವು ಪುಟಗೋಸಿ ಎಂಬುದನ್ನು ಹೇಳುವ ಸಲುವಾಗಿ ಈ ಗಿಫ್ಟ್ ಅನ್ನು ಕಳಿಸಿದೆ ಎನ್ನಲಾಗಿದೆ.

ಇತ್ತೀಚೆಗೆ ಸಮಾರಂಭವೊಂದರಲ್ಲಿ ಮಾತನಾಡಿದ ಅನಂತ ಕುಮಾರ್ ಹೆಗಡೆ, ಜೆಡಿಎಸ್ ಪಕ್ಷದ ಹೆಸರನ್ನು ಹೇಳದೆ ಕಾಂಗ್ರೆಸ್ ನಂತಹ ದೊಡ್ಡ ಪಕ್ಷವೊಂದು ಪುಟಗೋಸಿ ಪಕ್ಷದೊಂದಿಗೆ ಕೈ ಜೋಡಿಸಿದೆ ಎಂದು ವ್ಯಂಗ್ಯವಾಡಿದ್ದರು.

ಅನಂತ್ ಕುಮಾರ್ ಹೆಗಡೆ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ್ದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಎಲ್ಲರ ಮಾನಮುಚ್ಚಲು ಪುಟಗೋಸಿ ಬೇಕೆಬೇಕು. ಇಂತಹ ಹೇಳಿಕೆ ನೀಡುವ ಮೂಲಕ ಅನಂತಕುಮಾರ್ ಹೆಗಡೆ ತಮ್ಮ ಅನಾಗರಿಕತನವನ್ನು ಪ್ರದರ್ಶಿಸಿದ್ದಾರೆ ಎಂದು ಹೇಳಿದ್ದರು. ಇದೀಗ ಮಂಡ್ಯ ಜೆಡಿಎಸ್ ಕಾರ್ಯಕರ್ತರು, ಅನಂತಕುಮಾರ್ ಹೆಗಡೆಗೆ ಪುಟಗೋಸಿಯನ್ನು ಪೋಸ್ಟ್ ಮೂಲಕ ಗಿಫ್ಟ್ ಆಗಿ ಕಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...