alex Certify
ಕನ್ನಡ ದುನಿಯಾ       Mobile App
       

Kannada Duniya

‘ಹರಹರ ಮಹಾದೇವ್, ಹರಹರ ಮಹಾದಾಯಿ’

girish_mattannavar

ಬೆಳಗಾವಿ: ಉತ್ತರ ಕರ್ನಾಟಕದ ಹಲವು ಜಿಲ್ಲೆಗಳ ಜನರಿಗೆ, ಕುಡಿಯುವ ನೀರು ಒದಗಿಸುವ, ಮಹಾದಾಯಿ ನೀರಾವರಿ ಯೋಜನೆ ಜಾರಿಗೆ ಒತ್ತಾಯಿಸಿ, ನಡೆಯುತ್ತಿರುವ ಹೋರಾಟ ತೀವ್ರಗೊಂಡಿದೆ. ತಡರಾತ್ರಿ, ಹೋರಾಟಗಾರರು ಕಾನೂನು ಉಲ್ಲಂಘಿಸಿದ್ದಾರೆ.

ಬೆಳಗಾವಿ ಜಿಲ್ಲೆ ಖಾನಾಪುರ ತಾಲ್ಲೂಕಿನ ಕಣಕುಂಬಿ ಸಮೀಪ ಮಹಾದಾಯಿ ತಡೆಗೋಡೆಯನ್ನು ಹೋರಾಟಗಾರರು ಒಡೆದುಹಾಕಿದ್ದಾರೆ. ಬಿಜೆಪಿ ಮುಖಂಡ ಗಿರೀಶ್ ಮಟ್ಟಣ್ಣನವರ್, ನೇತೃತ್ವದಲ್ಲಿ ಹೋರಾಟಗಾರರು 11 ಮೀಟರ್ ಎತ್ತರದ ತಡೆಗೋಡೆಯನ್ನು ಕೆಡವಿದ್ದಾರೆ. ಈ ಸಂದರ್ಭದಲ್ಲಿ ‘ಹರಹರ ಮಹಾದೇವ್, ಹರಹರ ಮಹಾದಾಯಿ’ ಎಂದು ಘೋಷಣೆ ಕೂಗಿದ್ದಾರೆ. ಈ ಬಗ್ಗೆ ಹೇಳಿಕೆ ನೀಡಿರುವ ಗಿರೀಶ್ ಮಟ್ಟಣ್ಣನವರ್, ಬಿಜೆಪಿಗೂ ಇದಕ್ಕೂ ಸಂಬಂಧವಿಲ್ಲ. ಯೋಜನೆ ಜಾರಿಗಾಗಿ ಹೋರಾಟ ಮಾಡಿದ್ದೇವೆ. ಅದರ ಭಾಗವಾಗಿ ತಡೆಗೋಡೆ ಕೆಡವಿ ಹಾಕಿದ್ದೇವೆ ಎಂದು ತಿಳಿಸಿದ್ದಾರೆ.

ಆದರೆ, ಬೆಳಗಾವಿ ಜಿಲ್ಲಾ ಪೊಲೀಸ್ ಅಧೀಕ್ಷಕರು ಪ್ರತಿಕ್ರಿಯೆ ನೀಡಿ, ಯಾವುದೇ, ತಡೆಗೋಡೆಯನ್ನು ಹೋರಾಟಗಾರರು ತೆರವು ಮಾಡಿಲ್ಲ. ಸ್ಥಳದಲ್ಲಿ ಪೊಲೀಸ್ ಬಂದೋಬಸ್ತ್ ಹಾಕಲಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...