alex Certify
ಕನ್ನಡ ದುನಿಯಾ       Mobile App
       

Kannada Duniya

ಅಪಘಾತದಲ್ಲಿ ಯುವತಿ ಸಾವು

ತನ್ನ ತಂದೆಯೊಂದಿಗೆ ಬೈಕ್ ನಲ್ಲಿ ಮನೆಗೆ ತೆರಳುತ್ತಿದ್ದ ಯುವತಿ, ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನಲ್ಲಿ ನಡೆದಿದೆ.

ಇಪ್ಪತ್ತು ವರ್ಷದ ಕೀರ್ತನ ಮೃತಪಟ್ಟ ಯುವತಿಯಾಗಿದ್ದು, ಈಕೆ ತನ್ನ ತಂದೆ ರಮೇಶ್ ರಾವ್ ಜೊತೆ ಸಾಗರದಿಂದ ಕೋಡೂರಿಗೆ ಬೈಕ್ನಲ್ಲಿ ತೆರಳುವ ವೇಳೆ ಅಪಘಾತ ಸಂಭವಿಸಿದೆ.

ಇವರುಗಳಿದ್ದ ಬೈಕ್ ಗೆ ಬಟ್ಟೆ ಮಲ್ಲಪ್ಪ ಬಳಿ ಲಾರಿ ಮುಖಾಮುಖಿ ಡಿಕ್ಕಿಯಾಗಿದ್ದು, ತೀವ್ರವಾಗಿ ಗಾಯಗೊಂಡಿದ್ದ ತಂದೆ-ಮಗಳನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಕೀರ್ತನ ಮೃತಪಟ್ಟಿದ್ದಾರೆ. ರಮೇಶ್ ರಾವ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಹೊಸನಗರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...