alex Certify
ಕನ್ನಡ ದುನಿಯಾ       Mobile App
       

Kannada Duniya

ಮೊಹರಂ ಮೆರವಣಿಗೆ ವೀಕ್ಷಿಸುತ್ತಿದ್ದ ವೇಳೆ ಕುಸಿದ ಮನೆ ಛಾವಣಿ: ಬಾಲಕಿ ಸಾವು

ಬಳ್ಳಾರಿ: ಮೊಹರಂ ಮೆರವಣಿಗೆ ವೀಕ್ಷಿಸುತ್ತಿದ್ದ ವೇಳೆ ಮನೆಯ ಮೇಲ್ಛಾವಣಿ ಕುಸಿದುಬಿದ್ದ ಪರಿಣಾಮ ಬಾಲಕಿ ಸಾವನ್ನಪ್ಪಿದ್ದು, 30 ಜನರು ಗಾಯಗೊಂಡಿರುವ ಘಟನೆ ಬಳ್ಳಾರಿ ಜಿಲ್ಲೆಯ ಹೊಸಪೇಟೆ ಬಳಿ ನಡೆದಿದೆ.

ಇಲ್ಲಿನ ಚಿತ್ತವಾಡಗಿಯಲ್ಲಿ ನಸುಕಿನ ಜಾವ 5 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದೆ. ಉಷಾ (14) ಮೃತ ಬಾಲಕಿ. ಗಾಯಗೊಂಡವರ ಪೈಕಿ ಐವರ ಸ್ಥಿತಿ ಗಂಭೀರವಾಗಿದ್ದು, ಗಾಯಾಳುಗಳನ್ನು ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನು ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಸಮರ್ಪಕ ಚಿಕಿತ್ಸೆ ಸಿಗದ ಕಾರಣ ಸ್ಥಳೀಯರು ಆಸ್ಪತ್ರೆ ಸಿಬ್ಬಂದಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿತ್ತವಾಡಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...